fbpx
ಸಮಾಚಾರ

ಮಾಧ್ಯಮಗಳ ವಿರುದ್ಧ ಮತ್ತೊಮ್ಮೆ ಹರಿಹಾಯ್ದ ಮುಖ್ಯಮಂತ್ರಿ ಕುಮಾರಸ್ವಾಮಿ

ಮಾಧ್ಯಮಗಳ ವಿರುದ್ಧ ಮತ್ತೊಮ್ಮೆ ಗರಂ ಆಗಿರುವ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ತಾವು ಇನ್ನು ಮುಂದೆ ನಿಮ್ಮೊಂದಿಗೆ (ಪತ್ರಕರ್ತರು) ಮಾತನಾಡುವುದಿಲ್ಲ ಬೇಸರದಿಂದ ಮಾತನಾಡಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸಭೆ ನಡೆಯಿತು. ಪ್ರಸಕ್ತ ರಾಜಕೀಯ ವಿದ್ಯಮಾನಗಳು ಸೇರಿ ಸಾಕಷ್ಟು ವಿಷಯಗಳ ಬಗ್ಗೆ ನಾಯಕರು ಚರ್ಚೆ ನಡೆಸಿದ್ದಾರೆ. ಸಭೆ ಮುಗಿಸಿ ಬಂದ ನಂತರದಲ್ಲಿ ಮಾಧ್ಯಮಗಳ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಸಭೆ ಮುಗಿಸಿ ತೆರಳುವ ವೇಳೆ ಕುಮಾರಸ್ವಾಮಿ ಅವರನ್ನು ಮಾಧ್ಯಮಗಳು ಎದುರುಗೊಂಡವು. ಸಭೆಯುಲ್ಲಿ ನಡೆದ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ಕುಮಾರಸ್ವಾಮಿ ನಿರಾಕರಿಸಿದ್ದಾರೆ. “ನಿಮ್ಮಲ್ಲಿನ ಚರ್ಚೆ, ಸುದ್ದಿಗಳನ್ನು ನೋಡಿ ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ. ಅದೇನು ಸ್ಟೋರಿನೋ, ಅದೇನು ಚರ್ಚೆ ಮಾಡ್ತೀರೋ ಮಾಡಿಕೊಳ್ಳಿ. ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ. ಏನೇನು ಚರ್ಚೆ ಮಾಡ್ತಿರೋ ಮಾಡಿಕೊಳ್ಳಿ. ಮಜಾ ಮಾಡಿ,” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದೆ ಮೊದಲೇನಲ್ಲ:
ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ನಂತರ ಹೆಚ್ ಡಿ ಕುಮಾರಸ್ವಾಮಿಯವರಿಗೆ ಸುದ್ದಿವಾಹಿನಿಗಳ ಮೇಲೆ ಅಭಿಪ್ರಾಯ, ಸಂಬಂಧ ಅಷ್ಟಕಷ್ಟೆ. ತಮ್ಮ ಬಗ್ಗೆ ಇಲ್ಲಸಲ್ಲದ ಆರೋಪ, ಅಪಪ್ರಚಾರವನ್ನು ಮಾಧ್ಯಮಗಳು ಮಾಡುತ್ತವೆ ಎಂಬ ಅಸಮಾಧಾನ ಅವರಿಗೆ. ಹೀಗಾಗಿ ಮಾಧ್ಯಮಗಳ ವಿರುದ್ಧ ಬಹಿರಂಗವಾಗಿಯೇ ಸಿಎಂ ಗರಂ ಆಗಿದ್ದುಂಟು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top