fbpx
ಸಮಾಚಾರ

ಮೋದಿ ಕಾಲೆಳೆದ ರಮ್ಯಾ ವಿರುದ್ಧ ಬುಲೆಟ್ ಪ್ರಕಾಶ್ ಕೆಂಡಾಮಂಡಲ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ ರಮ್ಯಾ, ಫೋಟೋ ಶಾಪ್ ಮಾಡಿದ್ದ ಫೋಟೋವನ್ನು ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆಯಲು ಪ್ರಯತ್ನಿಸಿದ್ದರು. ಈಗ ಹಾಸ್ಯನಟ ಬುಲೆಟ್ ಪ್ರಕಾಶ್ ಅವರು ರಮ್ಯಾ ಅವರಿಗೆ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಬುಲೆಟ್ ಪ್ರಕಾಶ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ರಮ್ಯ ಮೇಡಮ್ (ಪದ್ಮಾವತಿ) ಈ ಮಗುವಿನ ವಯಸ್ಸಿನಲ್ಲಿ ನಿಮ್ಮ ತಂದೆಯವರು ನಿಮ್ಮ ಕಿವಿ ಹಿಂಡಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ. ನೀವು ಎರಡು ಚುನಾವಣೆಗಳಲ್ಲಿ ನಿಮ್ಮ ಹಕ್ಕು ಅಂದರೆ ಮತ ಚಲಾಯಿಸದವರು ನಿಮಗೆ ವಿಶ್ವನಾಯಕ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವುದಕ್ಕೆ ಯಾವುದೇ ನೈತಿಕತೆ ಇಲ್ಲ. ನಾಳೆ ವಿಡಿಯೋ ಮೂಲಕ ಉತ್ತರ ಕೊಡುತ್ತೇನೆ” ಎಂದು ಬರೆದು ಟ್ವೀಟ್ ಮಾಡಿದ್ದಾರೆ.

 

ಸೋಮವಾರ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ, ಪ್ರಧಾನಿ ಮೋದಿ ಪುಟ್ಟ ಮಗುವಿನ ಕಿವಿ ಹಿಡಿದಿರುವ ಫೋಟೋ ಹಾಗೂ ಹಿಟ್ಲರ್ ಮಗುವಿನ ಕಿವಿ ಹಿಡಿದ ಫೋಟೋವನ್ನು ಶೇರ್ ಮಾಡಿಕೊಂಡಿದ್ದರು. ಈ ಮೂಲಕ ಮೋದಿಯನ್ನು ಹಿಟ್ಲರ್ ಗೆ ಹೋಲಿಸಿದ್ದರು. ಈ ಟ್ವೀಟ್ ಮೋದಿ ಅಭಿಮಾನಿಗಳ ಆಕ್ರೊಶಕ್ಕೆ ಕಾರಣವಾಗಿತ್ತು.,

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top