fbpx
ಸಮಾಚಾರ

ರೈಲ್ವೆ ನೇಮಕಾತಿ : 310 ಹುದ್ದೆಗಳ ಅರ್ಜಿ ಆಹ್ವಾನ.

310 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವ ರೈಲ್ವೆ ಅರ್ಜಿಗಳನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಇಚ್ಛಿಸುವವರಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದಕ್ಕೆ 14/5/2019 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಯಾವ ಹುದ್ದೆಗಳು:
ಕ್ಲರ್ಕ್‌ ಕಮ್ ಟೈಪಿಸ್ಟ್, ಟೆಕ್ನಿಶಿಯನ್ ಹುದ್ದೆಗಳು

ವಿದ್ಯಾರ್ಹತೆ:
ಅರ್ಜಿಗೆ ಅರ್ಜಿ ಸಲ್ಲಿಸಲು 12ನೇ ತರಗತಿ ಪಾಸ್, ಪದವಿ, ಡಿಪ್ಲೊಮಾ, ಬಿಎಸ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 42 ವರ್ಷ, ಓಬಿಸಿ 45 ವರ್ಷ, ಎಸ್‌ಸಿ/ಎಸ್‌ಟಿ 47 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಕಂಪ್ಯೂಟರ್ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ವಿವರಗಳಿಗೆ ರೈಲ್ವೇ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ಹುದ್ದೆಯ ಕುರಿತಾದ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top