fbpx
ಸಮಾಚಾರ

ಟೀಮ್ ಇಂಡಿಯಾ ಸ್ಟಾರ್ ಬೌಲರ್ ಮೊಹಮದ್ ಶಮಿ ಪತ್ನಿ ಬಂಧನ.

ಪತಿಯ ಮನೆಗೆ ನುಗ್ಗಿ ಅತ್ತೆ ಜತೆ ವಾಗ್ವಾದಕ್ಕಿಳಿದ ಟೀಂ ಇಂಡಿಯಾ ತಂಡದ ವೇಗಿ ಮೊಹಮ್ಮದ್ ಶಮಿ ಪತ್ನಿ ಹಸಿನ್ ಜಹಾನ್ ಅವರನ್ನು ಅಮ್ರೋಹಾ ಪೊಲೀಸರು ಬಂಧಿಸಿದ್ದಾರೆ. 24 ಗಂಟೆಗಳ ಕಾಲ ಯಾವುದೇ ವಾರೆಂಟ್ ಇಲ್ಲದೆ ಬಂಧಿಸುವ ಕಾಯಿದೆಯಾದ ಭಾರತೀಯ ದಂಡ ಸಂಹಿತೆ 151ರ ಅಡಿಯಲ್ಲಿ ಶಮಿ ಪತ್ನಿಯ ಬಂಧನವಾಗಿದೆ.

ಕಳೆದ ರಾತ್ರಿ ತನ್ನ ಮಗಳು ಬೆಬೋ ಜೊತೆ ಏಕಾಏಕಿ ಮನೆಗೆ ನುಗ್ಗಿದ ಹಸಿನ್, ಶಮಿ ತಾಯಿ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಅಲ್ಲದೆ ಮನೆಯಲ್ಲಿದ್ದ ಇತರರ ಜೊತೆಯೂ ಜಗಳವಾಡಿದ್ದಾರೆ. ಇದರಿಂದ ಗಾಬರಿಗೊಂಡ ಶಮಿ ಮನೆಯವರು ಕೂಡಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಹಿಂದೆ ಹಸಿನ್ ಜಹಾನ್ ಶಮಿ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಅಲ್ಲದೇ ಕುಟುಂಬ ನಿರ್ವಹಣೆಗಾಗಿ ಪ್ರತಿ ತಿಂಗಳು 7 ಲಕ್ಷ ರೂ. ಕೋರಿ ಮನವಿ ಸಲ್ಲಿಸಿದ್ದರು. ಜಹಾನ್ ಅರ್ಜಿಯನ್ನು ಮಾನ್ಯ ಮಾಡಿದ್ದ ನ್ಯಾಯಾಲಯ ಮಗಳ ಜೀವನಕ್ಕಾಗಿ 80 ಸಾವಿರ ರೂ. ನೀಡುವಂತೆ ತಿಳಿಸಿತ್ತು. ಗುರುವಾರ ಶಮಿ ಹಾಗೂ ಅವರ ಕುಟುಂಬ ಮೇಲೆ ಐಪಿಸಿ ಸೆಕ್ಷನ್ 498ಎ (ವರದಕ್ಷಿಣೆ ಕಿರುಕುಳ) ಮತ್ತು 254ಎ (ಲೈಂಗಿಕ ದೌರ್ಜನ್ಯ) ಸೆಕ್ಷನ್ ಅಡಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top