fbpx
ಸಮಾಚಾರ

ಸಚಿವ ಡಿಕೆಶಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಂಸದ ಪ್ರತಾಪ್ ಸಿಂಹ.

ಸಂಸದ ಪ್ರತಾಪ್ ಸಿಂಹ ಅವರು ಸಚಿವ ಡಿಕೆ ಶಿವಕುಮಾರ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದು ಅಚ್ಚರಿ ಮೂಡಿಸಿದ್ದಾರೆ. ಮಾಜಿ ಸಿಎಂ ಎಸ್​.ಎಂ ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಲು ಆಗಮಿಸಿದ್ದ ಸಚಿವ ಡಿ.ಕೆ.ಶಿವಕುಮಾರ್​ ಅವರ ಕಾಲಿಗೆಬಿದ್ದು ಸಂಸದ ಪ್ರತಾಪ್​ ಸಿಂಹ ಆಶೀರ್ವಾದ ಪಡೆದಿದ್ದಾರೆ.

ಎಸ್​.ಎಮ್​.ಕೃಷ್ಣ ಅವರಿಗೆ ಶುಭಕೋರಿದ ನಂತರ ಮಾತನಾಡಿದ ಡಿ.ಕೆ.ಶಿವಕುಮಾರ್​ ಅವರು, ಎಸ್.ಎಂ.ಕೃಷ್ಣ ನನ್ನ ತಂದೆಯ ಸಮಾನ. ಅವರೊಂದಿಗೆ ಪ್ರತ್ಯೇಕ ರಹಸ್ಯ ಮಾತುಕತೆ ಏನೂ ಇಲ್ಲ. ನನ್ನದೇನಿದ್ದರೂ ತೆರೆದ ಪುಸ್ತಕವಿದ್ದಂತೆ. ಏನೇ ಇದ್ದರೂ ಬಹಿರಂಗವಾಗಿಯೇ ಮಾತನಾಡುತ್ತೇನೆ. ನಾನು ಯಾರಿಗೂ ಹೆದರುವ ಅಗತ್ಯವಿಲ್ಲ ಎಂದರು.

ರಾಜಕೀಯದಲ್ಲಿ ಯಾರೂ ಶಾಶ್ವತ ಮಿತ್ರರಲ್ಲ, ಶತ್ರಗಳೂ ಅಲ್ಲ ಎನ್ನುವ ಮಾತಿನಂತೆ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಸಚಿವಡಿ.ಕೆ.ಶಿವಕುಮಾರ್‌ ಅವರ ಕಾಲಿಗೆ ಬಿದ್ದು ಹೊಸ ಚರ್ಚೆ ಆರಂಭವಾಗಲು ಕಾರಣವಾಗಿದ್ದಾರೆ. ಡಿಕೆ ಶಿವಕುಮಾರ್ ಅವರು ಹಿರಿಯ ನಾಯಕರು. ಹಿರಿಯರ ಕಾಲಿಗೆ ಅಡ್ಡ ಬಿದ್ದರೆ ತಪ್ಪು ಏನಿಲ್ಲ ಎಂದು ಪ್ರತಾಪ್ ಸಿಂಹರ ಬೆಂಬಲಿಗರು ಹೇಳಿದ್ದರೂ ರಾಜಕೀಯದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top