fbpx
ಸಮಾಚಾರ

ನಟ ಕಿರಣ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಿಹಿ ಕಹಿ ಚಂದ್ರು ಮಗಳು ಹಿತಾ.

‘ಹಾಗೆ ಸುಮ್ಮನೇ’ ಖ್ಯಾತಿಯ ಕಿರಣ್ ಶ್ರೀನಿವಾಸ್ ಮತ್ತು ನಟಿ ಹಾಗೂ ಸಿಹಿಕಹಿ ಚಂದ್ರು ಮಗಳು ಹಿತಾ ಚಂದ್ರಶೇಖರ್ ಇಂದು, ಮೇ 01, 2019ರಂದು ಬೆಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹಲವು ದಿನಗಳ ಹಿಂದೆಯೇ ಈ ಜೋಡಿ ಹಸೆಮಣೆ ಏರುವ ಸುದ್ದಿ ಮಾದ್ಯಮಗಳಲ್ಲಿ ಬಂದಿದ್ದು ಇಂದು ಬೆಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಕಿರಣ್ ಹಾಗೂ ಹಿತಾ ಒಟ್ಟಿಗೆ ನಟಿಸಿದ್ದು ನಂತರ ‘ಲವ್‌’ನಲ್ಲಿ ಬಿದ್ದಿದ್ದಾರೆ. ಈ ವಿಷಯವನ್ನು ಅವರಿಬ್ಬರ ಸ್ನೇಹಿತೆ ಸೋನು ಗೌಡ “ಒಂಥರಾ ಬಣ್ಣಗಳಲ್ಲಿ ಒಂಥರಾ ಲವ್” ಎಂದು ಬಣ್ಣಿಸಿ ಪೋಸ್ಟ್ ಹಾಕುವ ಮೂಲಕ ಸುಮಾರು ದಿನಗಳ ಹಿಂದೆ ಬಹಿರಂಗ ಮಾಡಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದು, ಇಂದು ಅವರಿಬ್ಬರ ನಿಶ್ಚಿತಾರ್ಥ ಬೆಂಗಳೂರಿನಲ್ಲಿ ನಡೆದಿದೆ.

 

 

ಕಿರಣ್ ಮತ್ತು ನಾನು ‘ಒಂಥರಾ ಬಣ್ಣಗಳು’ ಸಿನಿಮಾದಲ್ಲಿ ಜೊತೆಯಾಗಿ ಅಭಿನಯಿಸುತ್ತಿದ್ದೆವು. ಈ ಸಿನಿಮಾದ ಮೂಲಕ ಕಿರಣ್ ಪರಿಚಯವಾಗಿದ್ದು, ಆದರೆ ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ ಸ್ನೇಹಿತರಾಗಿದ್ದು, ಬಳಿಕ ಪರಸ್ಪರ ಪ್ರೀತಿಸುತ್ತಿದ್ದೆವು. ಇತ್ತೀಚೆಗಷ್ಟೆ ಇಬ್ಬರು ಮದುವೆ ಮಾಡಿಕೊಳ್ಳಬೇಕು ಎಂದು ನಿರ್ಧರಿಸಿದ್ದೇವೆ ಎಂದು ಹಿತಾ ಅವರು ತಮ್ಮ ಪ್ರೀತಿಯ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ತಿಂಗಳ ಹಿಂದೆಯೇ ತಿಳಿಸಿದ್ದರು.

ನಟ ಕಿರಣ್ ಹಾಗೂ ಹಿತಾ ಕಳೆದ ಕೆಲ ವರ್ಷಗಳಿಂದ ಪರಸ್ಪರ ಇಷ್ಟಪಟ್ಟಿದ್ದರು. ಕಿರಣ್ 2008ರಲ್ಲಿ “ಹಾಗೆ ಸುಮ್ಮನೆ” ಚಿತ್ರದ ಮೂಲಕ ಬೆಳ್ಳಿತೆರೆ ಪ್ರವೇಶಿಸ್ದ್ದು ಹಲವು ಸಿನಿಮಾ, ಕಿರುತೆರೆ ಧಾರಆವಾಹಿ, ರಿಯಾಲಿಟಿ ಶೋಗಳಲ್ಲಿ ನಟಿಸಿದ್ದಾರೆ. ಇನ್ನು ಹಿತಾ ಚಂದ್ರಶೇಖರ್ ಸಹ ಬಹಳಷ್ಟು ಚಿತ್ರಗಲಲ್ಲಿ ಕಾಣಿಸಿಕೊಂಡಿದ್ದು ಇತ್ತೀಚೆಗೆ ಬಿಡುಗಡೆಯಾದ ಜಗ್ಗೇಶ್ ಅಭಿನಯದ “ಪ್ರೀಮಿಯರ್ ಪದ್ಮಿನಿ”ಯಲ್ಲಿ ಸಹ ಹಿತಾ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top