fbpx
ಸಮಾಚಾರ

ಸಚಿವ ರೇವಣ್ಣಗೆ ತಿರುಗೇಟು ನೀಡಿದ ಹಾಸನ ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್.

ಹಾಸನದ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಲಹೆ ಪಡೆದು ಈಗಿನ ಡಿಸಿ ಪ್ರಿಯಾಂಕ ಕೆಲಸ ಮಾಡುತ್ತಿದ್ದಾre ಎಂದು ಆರೋಪ ಮಾಡಿದ್ದ ಸಚಿವ ಹೆಚ್.ಡಿ ರೇವಣ್ಣ ಅವರ ಹೇಳಿಕೆಗೆ ಹಾಸನ ಡಿಸಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸಚಿವರಿಗೆ ತಿರುಗೇಟು ನೀಡಿದ್ದಾರೆ.

“ಐ ಅ್ಯಮ್ ವರ್ಕಿಂಗ್ ಇಂಡಿಪೆಂಡೆಂಟ್ಲಿ” ಯಾರಿಂದಲೂ ಸಲಹೆ ಪಡೆಯುವ ಅವಶ್ಯಕತೆ ನನಗಿಲ್ಲ ” ಎಂದು ಹೇಳುವ ಮೂಲಕ ರೇವಣ್ಣಗೆ ತಿರುಗೇಟು ನೀಡಿದ್ದಾರೆ. ಹಾಸನದ ಹಿಂದಿನ ಜಿಲ್ಲಾಧಿಕಾರಿ ರೋಹಿಣಿಯವರು ನನ್ನ ಬ್ಯಾಚ್ ಮೇಟ್ ಹಾಗಾಗಿ ಅವರನ್ನು ಭೇಟಿ ಮಾಡಿದ್ದೆ, ಇದರಲ್ಲಿ ವಿಶೇಷವೇನಿದೆ. ನನಗೆ ಯಾರ ಸಲಹೆಯನ್ನು ಪಡೆಯುವ ಅವಶ್ಯಕತೆ ಇಲ್ಲ ಎಂದಿರುವ ಅವರು ರೋಹಿಣಿ ಸಿಂಧೂರಿ ಎರಡು ದಿನ ತಮ್ಮೊಂದಿಗಿದ್ದರು ಎಂಬ ಆರೋಪ ಅಲ್ಲಗಳೆದಿದ್ದಾರೆ.

ಪ್ರಿಯಾಂಕ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡದೆ ಹಾಸನದ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಭೇಟಿ ಮಾಡಿದ್ದರು. ಈ ಭೇಟಿ ಅಗತ್ಯವೇನಿತ್ತು ಎಂದು ರೇವಣ್ಣ ಪ್ರಶ್ನಿಸಿದ್ದರು. ಅಲ್ಲದೇ ಪ್ರಿಯಾಂಕ ಆಡಳಿತದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ರೋಹಿಣಿ ಸಿಂಧೂರಿ ಭೇಟಿ ಮಾಡಿ ಸಲಹೆ ಪಡೆದಿರುವ ವಿಚಾರವನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಅಲ್ಲಗಳೆದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top