fbpx
ಸಮಾಚಾರ

ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ- 1072 ಹುದ್ದೆಗಳಿಗೆ ಅರ್ಜಿ ಆಹ್ವಾನ.

1072 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್‌) ಅರ್ಜಿ ಆಹ್ವಾನಿಸಿದೆ. 14.05.2019ರಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 16.06.2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್ / ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಮತ್ತು ಹುದ್ದೆಗೆ ಸಂಬಂಧಪಟ್ಟಂತೆ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500ರಿಂದ 81,100 ರು. ವೇತನವನ್ನು ನಿಗದಿಪಡಿಸಲಾಗಿದೆ..

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಮೆಡಿಕಲ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
100 ರು. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

 

ಹುದ್ದೆ ಕುರಿತ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top