fbpx
ಸಮಾಚಾರ

ಸ್ಯಾಂಡಲ್‍ವುಡ್ ನಟಿ ಹರ್ಷಿಕಾ ಪೂಣಚ್ಚಗೆ ಅಪರಿಚಿತನಿಂದ ಕಿರುಕುಳ- ನಟ ಭುವನ್ ಕೈ ಮುಖಕ್ಕೆ ಗಾಯ.

ಸಂಬಂಧಿಕರೊಬ್ಬರ ನಿಶ್ಚಿತಾರ್ಥಕ್ಕೆ ಹೋಗಿದ್ದ ಸ್ಯಾಂಡಲ್‍ವುಡ್ ತಾರೆ ಹರ್ಷಿಕಾ ಪೂಣಚ್ಚಗೆ ಅಹಿತಕರ ಘಟನೆಯೊಂದು ಎದುರಾಗಿದೆ. ಹರ್ಷಿಕಾ ಪೂಣಚ್ಚಗೆ ಸಂಬಂಧಿಕರ ನಿಶ್ಚಿತಾರ್ಥದಲ್ಲಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮಡಿಕೇರಿಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿಯ ನೀರುಕೊಲ್ಲಿ ಗ್ರಾಮದಲ್ಲಿನ ರೆಸಾರ್ಟ್ ನಲ್ಲಿ ಈ ಘಟನೆ ನಡೆದಿದ್ದು, ಬನ್ಸಿ ನಾಣಯ್ಯ ಮತ್ತು ಬಿಪಿನ್ ದೇವಯ್ಯ ಎಂಬವರು ಕಿರುಕುಳ ನೀಡಿದ್ದಾರೆ. ಗುರುವಾರ ರೆಸಾರ್ಟ್ ನಲ್ಲಿ ಸಂಬಂಧಿಕರ ನಿಶ್ಚಿತಾರ್ಥ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮದಲ್ಲಿ ಹರ್ಷಿಕಾ ಜೊತೆ ಬನ್ಸಿ ನಾಣಯ್ಯ ಮತ್ತು ಬಿಪಿನ್ ದೇವಯ್ಯ ಅಸಭ್ಯವಾಗಿ ವರ್ತಿಸಿದ್ದರು.

ಇದ್ರಿಂದ ಮಾತಿಗೆ ಮಾತು ಬೆಳೆದು ಗಲಾಟೆ ಜೋರಾದಾಗ ನಟ ಭುವನ್, ಹರ್ಷಿಕಾ ಪರ ನಿಂತಿದ್ದಾರೆ. ಆಗ ಹೊಡೆದಾಟ ನಡೆದಿದ್ದು, ಭುವನ್ ಅವರ ಕೈ ಹಾಗೂ ಮುಖಕ್ಕೆ ಗಾಯವಾಗಿದೆ. ರಾತ್ರಿಯೇ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಭುವನ್ ಚಿಕಿತ್ಸೆ ಪಡೆದಿದ್ದಾರೆ. ಅಲ್ಲದೆ ಹರ್ಷಿಕಾ ಜೊತೆ ಮಡಿಕೇರಿ ಗ್ರಾಮಾಂತರ ಠಾಣೆಗೆ ಆಗಮಿಸಿ ಬನ್ಸಿ ಹಾಗೂ ಬಿಪಿನ್ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ‌. ಇಬ್ಬರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇಬ್ಬರ ಮೇಲೆ ಐಪಿಸಿ ಸೆಕ್ಷನ್ 232, 242, 354 ಮತ್ತು 506 ಅಡಿಯಲ್ಲಿ ದೂರು ದಾಖಲಾಗಿತ್ತು.

ಪೊಲೀಸರು ಇಂದು ಬನ್ಸಿ ನಾಣಯ್ಯನನ್ನು ಬಂಧಿಸಿದ್ದು, ಮಡಿಕೇರಿ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇತ್ತ ತಲೆಮರೆಸಿಕೊಂಡಿರುವ ಬಿಪಿನ್ ದೇವಯ್ಯನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇನ್ನು ಘಟನೆಯಲ್ಲಿ ಭುವನ್ ಗಾಯಗೊಂಡಿದ್ದರಿಂದ ರಾತ್ರಿಯೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಭುವನ್ ಬೆಂಗಳೂರಿಗೆ ತೆರಳಿದ್ದಾರೆ. ಹರ್ಷಿಕಾ ಪೂಣಚ್ಚ ಕೂಡ ಭುವನ್ ಜೊತೆಯಲ್ಲೇ ಬೆಂಗಳೂರಿಗೆ ಬಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top