fbpx
ಸಮಾಚಾರ

“SSLCಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬರಲು ಪತ್ನಿ ಭವಾನಿ ಕಾರಣ, ರೋಹಿಣಿ ಕಡಿದು ದಬಾಕಿರೋದು ಏನು?” HD ರೇವಣ್ಣ ಹೇಳಿಕೆ.

ಕಳೆದ ಎಲ್ಲ ವರ್ಷದ ದಾಖಲೆಗಳನ್ನೂ ಮೀರಿ ಈ ಬಾರಿ SSLC ಪರೀಕ್ಷೆ ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಇದಕ್ಕೆ ಕಾರಣವೇನು? ಎಂಬ ಬಗ್ಗೆ ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಲೇ ಇದೆ. ಅದೇನೇ ಇರಲಿ, ಇದೀಗ ಸ್ವತಃ ಲೋಕೋಪಯೋಗಿ ಸಚಿವ ಎಚ್​.ಡಿ. ರೇವಣ್ಣನವರೇ ತಮ್ಮ ಜಿಲ್ಲೆ ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆಯಲು ಕಾರಣವೇನು ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ ಸಭೆ ನಡೆಸಲಾಗಿತ್ತು. ಅಲ್ಲದೆ ವಿಶೇಷ ತರಗತಿ ನಡೆಸಲು ಸೂಚಿಸಿದ್ದರು. ಇದೇ ಮುಖ್ಯ ಕಾರಣ ಎಂದು ಹೇಳಿದ್ದಾರೆ.

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಎಸ್‍ಎಸ್ ಎಲ್‍ಸಿ ಫಲಿತಾಂಶದಲ್ಲಿ ಉತ್ತಮ ಸ್ಥಿತಿಗೆ ಸರ್ಕಾರದ ನೀತಿಗಳು ಕಾರಣವಾಗಿದೆ. ಹಾಗೆಯೇ ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದೆ ವೇಳೆ ಹಾಸನ ಹಿಂದಿನ ಡಿಸಿ ರೋಹಿಣಿ ವಿರುದ್ದವೂ ಕಿಡಿಕಾರಿದ ರೇವಣ್ಣ “ಹಿಂದಿನ ಜಿಲ್ಲಾಧಿಕಾರಿ ಕಡಿದು ದಬಾಕಿರೋದು ಏನು? ಶಿಕ್ಷಕರಿಗೆ ಪಾಠ ಮಾಡಲು ಹೋಗಿ ಅವರೇ ಉಗಿಸಿಕೊಂಡಿದ್ದರು. ನನ್ನ ಪತ್ನಿ ಪ್ರಯತ್ನ ಸಫಲವಾಗಿದೆ. ಆದರೆ, ಇದನ್ನು ನಾನು ಹೇಳಿಕೊಂಡಿದ್ದೇನೆಯೇ? ಶಿಕ್ಷಣದ ಅಭಿವೃದ್ಧಿಗೆ ಕುಮಾರಸ್ವಾಮಿ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ರೇವಣ್ಣ, ರೋಹಿಣಿ ವಿರುದ್ಧ ಟಾಂಗ್ ಕೊಟ್ಟರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top