fbpx
ಸಮಾಚಾರ

ಗಾನಕೋಗಿಲೆ ಎಸ್.ಜಾನಕಿ ಆಸ್ಪತ್ರೆಗೆ ದಾಖಲು.

ಖ್ಯಾತ ಹಿನ್ನೆಲೆ ಗಾಯಕಿ, ದಕ್ಷಿಣ ಭಾರತದ ಕೋಗಿಲೆ ಎಸ್ ಜಾನಕಿ ಅವರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮ್ಮ ಫಾಮ್‍ಹೌಸ್‍ನಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿರುವ ಜಾನಕಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾನಕಿ ಅವರು ಕೆಲವು ದಿನಗಳ ಹಿಂದೆ ಮೈಸೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಮನೆಯಲ್ಲಿ ಕಾಲು ಜಾರಿ ಬಿದ್ದು ಸೊಂಟ ಮುರಿದುಕೊಂಡಿದ್ದಾರೆ ಎನ್ನಲಾಗಿದೆ. ಸೊಂಟ ಮುರಿದ ಹಿನ್ನೆಲೆ ಕಳೆದ ಮೂರು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಳೆದ ಮೂರು ದಿನಗಳಿಂದ ಜಾನಕಿ ಅವರು ಚಿಕಿತ್ಸೆ ಪಡೆಯುತ್ತಿದ್ದು ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

ಎಸ್ ಜಾನಕಿ ಅವರಿಗೆ ಈಗ ಸುಮಾರು 80 ವರ್ಷ ವಯಸ್ಸಾಗಿದ್ದು, ಸುಮಾರು 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಜೊತೆಗೆ ನಾಲ್ಕು ಬಾರಿ ತಮ್ಮ ಹಾಡಿಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ‘ನನಗೆ ವಯಸ್ಸಾಯಿತು, ಈವರೆಗೆ ಹಲವು ಭಾಷೆಗಳಲ್ಲಿ ಹಾಡಿದ್ದೇನೆ. ನನಗೀಗ ವಿಶ್ರಾಂತಿ ಬೇಕಿದೆ. ಇನ್ನು ನಾನು ಹಾಡುವುದನ್ನು ನಿಲ್ಲಿಸುತ್ತೇನೆ’ ಎಂದು ಕಳೆದ ವರ್ಷ ಹೇಳಿದ್ದರು. ಅದೇ ರೀತಿ ವಿಶ್ರಾಂತಿ ಜೀವನ ನಡೆಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top