fbpx
ಸಮಾಚಾರ

#KarnatakaJobsForKannadigas: ಉದ್ಯೋಗಕ್ಕಾಗಿ ಕನ್ನಡಿಗರ ಅಭಿಯಾನಕ್ಕೆ ರಾಜಕಾರಣಿಗಳ ಪ್ರತಿಕ್ರಿಯೆ ಹೇಗಿದೆ?

ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗಗಳು ಸಿಗಬೇಕು ಎಂದು ಆಗ್ರಹಿಸಿ ಟ್ವೀಟರ್‌ನಲ್ಲಿ ಆರಂಭಗೊಂಡಿರುವ #KarnatakaJobsForKannadigas ಎಂಬ ಹ್ಯಾಶ್‌ ಟ್ಯಾಗ್‌ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದೆ. ಕನ್ನಡಿಗರ ಈ ಅಭಿಯಾನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನೊಳಗೊಂಡ ರಾಜ್ಯದ ಅನೇಕ ರಾಜಕಾರಣಿಗಳು ಪಕ್ಷಾತೀತವಾಗಿ ಬೆಂಬಲಕ್ಕೆ ನಿಂತಿದ್ದಾರೆ.

ಅಭಿಯಾನಕ್ಕೆ ಜಿಸಿಸಿ ಬೆಂಬಲ:
ಕರ್ನಾಟಕದಲ್ಲಿ ಸೃಷ್ಟಿಯಾಗುವ ಕೆಲಸಗಳಲ್ಲಿ ಸಿಂಹಪಾಲು ಈ ಮಣ್ಣಿನ ಮಕ್ಕಳಿಗೆ ದೊರಕಬೇಕು.” ಎಂದು ಟ್ವೀಟ್ ಮಾಡುವ ಮೂಲಕ ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ.

 

 

ಮುಖ್ಯಮಂತ್ರಿಗಳ ಬೆಂಬಲ:
“ಸಾಮಾಜಿಕ ಜಾಲತಾಣದಲ್ಲಿ ನಮ್ಮ ರಾಜ್ಯದ ಯುವ ಜನತೆ ರಾಜ್ಯದಲ್ಲಿ ಸೃಷ್ಟಿಯಾಗುವ ಉದ್ಯೋಗಳು ಕನ್ನಡಿಗರಿಗೆ ದಕ್ಕಬೇಕು ಎಂದು ಹೋರಾಟ ನೆಡೆಸುತ್ತಿರುವುದನ್ನು ಗಮನಿಸಿದ್ದೇನೆ. ಕನ್ನಡಿಗರ ಹಕ್ಕೊತ್ತಾಯವನ್ನು ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು.” ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದಾರೆ.

 

 

ನನ್ನ ಬೆಂಬಲ ಇದೆ ಎಂದ್ರು ಸಿದ್ದರಾಮಯ್ಯ:
“ಖಾಸಗಿ ಕ್ಷೇತ್ರವೂ ಸೇರಿದಂತೆ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕೆಂಬುದು ನನ್ನ ನಿಲುವು. ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನಕ್ಕೆ ನನ್ನ ಬೆಂಬಲ‌ ಇದೆ.” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

 

ಸಿಟಿ ರವಿ ಸಾಥ್:
“ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಮೊದಲಿಗೆ ಕನ್ನಡಿಗರಿಗೆ ದಕ್ಕಬೇಕು. ಈ ನಿಟ್ಟಿನಲ್ಲಿ ನಡೆದಿರುವ ಸದುದ್ದೇಶ ಪೂರಿತ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಇದು ಯಾವುದೇ ಕಾರಣಕ್ಕೂ ಹೊರ ರಾಜ್ಯದವರ ಮತ್ತು ಅನ್ಯ ಭಾಷಿಗರ ವಿರುದ್ಧದ ಹೋರಾಟವಾಗಬಾರದು.” ಎಂದು ಸಿಟಿ ರವಿ ಟ್ವೀಟ್ ಮಾಡಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top