fbpx
ಸಮಾಚಾರ

“ಸುಮಲತಾ ಗೆದ್ದು ಕೇಂದ್ರ ಸಚಿವರಾಗುವುದು ಗ್ಯಾರಂಟೀ”

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಇಡೀ ಇಂಡಿಯಾವೇ ಮಂಡ್ಯ ಮೇಲೆ ಕಣ್ಣು ನೆಟ್ಟಿತ್ತು. ಅದರಂತೆ ಮಂಡ್ಯದಲ್ಲಿ ದಾಖಲೆಯ ಶೇಕಡ 80ರಷ್ಟು ಮತದಾನ ಕೂಡ ಆಗಿದೆ. ಮತದಾನ ನಂತರ ಮಂಡ್ಯದಲ್ಲಿ ಹಲವಾರು ಬೆಳವಣಿಗೆಗಳು ಮಂಡ್ಯದಲ್ಲಿ ನಡೆಯುತ್ತಿವೆ.

ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್​​​ ಅವರು ಗೆಲುವು ಸಾಧಿಸುತ್ತಾರೆ ಎಂದು ಬಸವಕಲ್ಯಾಣದ ಬಸವಧರ್ಮದ ಪ್ರಸಾರಕ ಬಸವಾನಂದಸ್ವಾಮಿ ವಿಭೂತಿಮಠ ಅವರು ಭವಿಷ್ಯ ನುಡಿದಿದ್ದಾರೆ. 2019ನೇ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್​​​​​​ ಗೆಲ್ಲುತ್ತಾರೆ. ಮಾತೃಹೃದಯಿ ಗುಣಗಳನ್ನು ಹೊಂದಿರುವ ಸುಮಲತಾ ಜಯ ಸಾಧಿಸುವುದರ ಜತೆಗೆ ಕೇಂದ್ರ ಸಚಿವರಾಗುವುದು ನಿಶ್ಚಿತವಾಗಿದೆ. ಪ್ರಬುದ್ಧ ಮೃದು ಮಾತಿನಿಂದ ಎಲ್ಲ ಸಮುದಾಯದವರ ಹೃದಯ ಗೆದ್ದಿರುವ ಸುಮಲತಾಗೆ ಉತ್ತಮ ರಾಜಕೀಯ ಭವಿಷ್ಯವಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ದೇಶದ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಲಿದೆ. ನರೇಂದ್ರ ಮೋದಿ ಅವರು ಎರಡನೇ ಬಾರಿ ಪ್ರಧಾನ ಮಂತ್ರಿಯಾಗುತ್ತಾರೆ. ರಾಜ್ಯದಲ್ಲಿ ಪ್ರಸ್ತುತ ಆಡಳಿತದಲ್ಲಿರುವ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಲಿದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಹಾಗೆಯೆ ಬಿ.ಎಸ್.​​​​ ಯಡಿಯೂರಪ್ಪ ಮತ್ತೆ ಸಿಎಂ ಆಗುವುದು ಖಚಿತ ಎಂದು ಬಸವಾನಂದ ಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಅಂದಹಾಗೆ ಮಂಡ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬ ಲೆಕ್ಕಾಚಾರಗಳು ತೀವ್ರವಾಗಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲೇಬೇಕೆಂದು ಪಣತೊಟ್ಟು ಮಂಡ್ಯದಲ್ಲಿ ಪ್ರಚಾರ ನಡೆಸಿದ್ದಾರೆ. ಇದು ಅವರ ಪಾಲಿಗೆ ಅತ್ಯಂತ ಪ್ರತಿಷ್ಠೆಯ ಚುನಾವಣೆ. ಹಾಗೆಂದು ಅವರಿಗೆ ಮಂಡ್ಯದಲ್ಲಿನ ಗೆಲುವು ಸುಲಭವಲ್ಲ. ಅವರ ಎದುರು ಇರುವುದು ಪಕ್ಷೇತರ ಅಭ್ಯರ್ಥಿಯಾಗಿ ನಿಂತಿರುವ ಸುಮಲತಾ ಅಂಬರೀಷ್. ಅವರಿಗೆ ಬಿಜೆಪಿಯ ಬೆಂಬಲ ದೊರಕಿದೆ. ಕಾಂಗ್ರೆಸ್‌ನ ಅತೃಪ್ತ ಮುಖಂಡರು ಕೂಡ ಅವರೊಂದಿಗೆ ಕೈ ಜೋಡಿಸಿದ್ದಾರೆ. ಹೀಗಾಗಿ ಇಲ್ಲಿ ನಿಕಟ ಪೈಪೋಟಿ ಇದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top