fbpx
ಸಮಾಚಾರ

ಮಂಡ್ಯ ಚುನಾವಣೆಯಲ್ಲಿ ಸೋತರೂ ನಿಖಿಲ್‌ಗೆ ಸಿಗಲಿದೆಯೇ ಸಚಿವ ಸ್ಥಾನ.?

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಇಡೀ ಇಂಡಿಯಾವೇ ಮಂಡ್ಯ ಮೇಲೆ ಕಣ್ಣು ನೆಟ್ಟಿತ್ತು. ಅದರಂತೆ ಮಂಡ್ಯದಲ್ಲಿ ದಾಖಲೆಯ ಶೇಕಡ 80ರಷ್ಟು ಮತದಾನ ಕೂಡ ಆಗಿದೆ. ಮತದಾನ ನಂತರ ಮಂಡ್ಯದಲ್ಲಿ ಹಲವಾರು ಬೆಳವಣಿಗೆಗಳು ಮಂಡ್ಯದಲ್ಲಿ ನಡೆಯುತ್ತಿವೆ.

ಚುನಾವಣೆಯಲ್ಲಿ ಫಲಿತಾಂಶ ಜೆಡಿಎಸ್‌ಗೆ ವಿರೊಧ್ವಾಗಿ ಬಂದರೆ ನಿಖಿಲ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಬೇಕು ಎಂದು ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರಿಂದ ಒತ್ತಾಯ ಕೇಳಿಬಂದಿದೆ. ಸ್ಥಳೀಯ ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ ಕೈಕೊಟ್ಟ ಹಿನ್ನೆಲೆಯಲ್ಲಿ ಒಂದು ವೇಳೆ ನಿಖಿಲ್ ಅವರಿಗೆ ಚುನಾವಣೆಯಲ್ಲಿ ಹಿನ್ನಡೆಯಾದರೆ ಅವರನ್ನು ಸಕ್ರಿಯ ರಾಜಕಾರಣದಲ್ಲಿ ಇರುವಂತೆ ಮಾಡಬೇಕು. ಏಕೆಂದರೆ, ಈ ಚುನಾವಣೆಯಲ್ಲಿ ಒಂದು ವೇಳೆ ಹಿನ್ನಡೆಯಾದರೂ ಅದು ತಾತ್ಕಾಲಿಕ.

ಹೀಗಾಗಿ ಮಂಡ್ಯದಲ್ಲಿ ಅವರು ಸಕ್ರಿಯವಾಗಿ ಇರುವಂತೆ ಮಾಡಲು ಅವರಿಗೆ ರಾಜಕೀಯ ಸ್ಥಾನಮಾನ ನೀಡುವಂತಾಗಬೇಕು. ಹೀಗಾಗಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿಸಿ ಸಚಿವ ಸ್ಥಾನ ನೀಡಬೇಕು ಎಂದು ಮಂಡ್ಯ ಜಿಲ್ಲೆಯ ಕೆಲ ಜೆಡಿಎಸ್ ನಾಯಕರು ಒತ್ತಾಯ ಮಾಡಿದ್ದಾರೆ ಎನ್ನಲಾಗುತ್ತಿದೆ.

ಅಂದಹಾಗೆ ಮಂಡ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬ ಲೆಕ್ಕಾಚಾರಗಳು ತೀವ್ರವಾಗಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲೇಬೇಕೆಂದು ಪಣತೊಟ್ಟು ಮಂಡ್ಯದಲ್ಲಿ ಪ್ರಚಾರ ನಡೆಸಿದ್ದಾರೆ. ಇದು ಅವರ ಪಾಲಿಗೆ ಅತ್ಯಂತ ಪ್ರತಿಷ್ಠೆಯ ಚುನಾವಣೆ. ಹಾಗೆಂದು ಅವರಿಗೆ ಮಂಡ್ಯದಲ್ಲಿನ ಗೆಲುವು ಸುಲಭವಲ್ಲ. ಅವರ ಎದುರು ಇರುವುದು ಪಕ್ಷೇತರ ಅಭ್ಯರ್ಥಿಯಾಗಿ ನಿಂತಿರುವ ಸುಮಲತಾ ಅಂಬರೀಷ್. ಅವರಿಗೆ ಬಿಜೆಪಿಯ ಬೆಂಬಲ ದೊರಕಿದೆ. ಕಾಂಗ್ರೆಸ್‌ನ ಅತೃಪ್ತ ಮುಖಂಡರು ಕೂಡ ಅವರೊಂದಿಗೆ ಕೈ ಜೋಡಿಸಿದ್ದಾರೆ. ಹೀಗಾಗಿ ಇಲ್ಲಿ ನಿಕಟ ಪೈಪೋಟಿ ಇದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top