fbpx
ಸಮಾಚಾರ

“50 ಕೋಟಿ ಕೊಟ್ಟರೇ ಮೋದಿಯನ್ನು ಕೊಲ್ಲುತ್ತೇನೆ” ಮಾಜಿ ಯೋಧ ತೇಜ್‍ ಬಹದ್ದೂರ್ ವೀಡಿಯೋ ವೈರಲ್.

ಸೇನೆಯಿಂದ ವಜಾಗೊಂಡಿರುವ ಮಾಜಿ ಯೋಧ ಹಾಗೂ ವಾರಾಣಸಿ ಕ್ಷೇತ್ರದಿಂದ ಎಸ್​ಪಿ ಪಕ್ಷದ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿದು ನಾಮಪತ್ರ ತಿರಸ್ಕೃತಗೊಂಡಿರುವ ತೇಜ್​ ಬಹದ್ದೂರ್​ ಯಾದವ್ ಅವರದ್ದು ಎನ್ನಲಾದ ವಿವಾದಿತ ವಿಡಿಯೋ​ ಕ್ಲಿಪ್​ ಒಂದು ವೈರಲ್​ ಆಗಿದೆ. 50 ಕೋಟಿ ರೂ. ಕೊಟ್ಟರೆ ಪ್ರಧಾನಿ ಮೋದಿಯವರನ್ನು ಕೊಲ್ಲುವುದಾಗಿ ಮಾತನಾಡಿರುವುದು ವಿಡಿಯೋದಲ್ಲಿದೆ ಎಂದು ಹೇಳಲಾಗಿದೆ.

ಆದರೆ ವಿಡಿಯೋ ಎರಡು ವರ್ಷದ ಹಳೆಯದ್ದಾಗಿದ್ದು, ವಿಡಿಯೋದಲ್ಲಿರುವುದು ನಾನೇ ಎಂದು ತೇಜ್ ಬಹುದ್ದೂರ್ ಒಪ್ಪಿಕೊಂಡಿದ್ದಾರೆ. ಅಲ್ಲದೆ ಈ ವಿಡಿಯೋ ರಿಲೀಸ್ ಹಿಂದೆ ಯಾರದ್ದೋ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ. ಈ ವಿಡಿಯೋದಲ್ಲಿರುವುದು ತಾನೇ. ಈ ವಿಡಿಯೋವನ್ನು ನನಗೇ ಗೊತ್ತಿಲ್ಲದೆ 2017 ರಲ್ಲಿ ಮಾಡಲಾಗಿತ್ತು. ನಾನು ಸೈನಿಕರು ಎದುರಿಸುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ಈ ವಿಡಿಯೋದಲ್ಲಿ ಮಾತನಾಡಿದ್ದೆ. ಆದರೆ ಯಾವುದೇ ಕಾರಣಕ್ಕೂ ಪ್ರಧಾನಿ ಮೋದಿ ಹತ್ಯೆಯ ಬಗ್ಗೆ ಮಾತನಾಡಿರಲಿಲ್ಲ. ಇದು ವಾಸ್ತವಕ್ಕೆ ದೂರವಾದುದು” ಎಂದು ತೇಜ್ ಬಹದ್ದೂರ್ ಹೇಳಿದ್ದಾರೆ

ವಿಡಿಯೋದಲ್ಲೇನಿದೆ?:
ತನ್ನ ಗೆಳೆಯರೊಂದಿಗೆ ಕುಳಿತುಕೊಂಡು ಮದ್ಯಪಾನ ಮಾಡುತ್ತಾ ತನ್ನ ಸ್ನೇಹಿತನೊಬ್ಬನ ಜೊತೆ ತೇಜ್ ಬಹದ್ದೂರ್ ಯಾದವ್ ನಡೆಸಿರುವ ಸಂಭಾಷಣೆ ಈ ರೀತಿ ಇದೆ.
ತೇಜ್ ಬಹದ್ದೂರ್: ನನಗೆ ಹಣ ಕೊಟ್ರೆ ಮೋದಿಯನ್ನು ಕೊಲ್ಲುತ್ತೇನೆ.
ಸ್ನೇಹಿತ: ಮೋದಿಯನ್ನು ಕೊಲ್ಲಲು ಆಗುತ್ತಾ..?
ತೇಜ್ ಬಹದ್ದೂರ್: ನನಗೆ 50 ಕೋಟಿ ಕೊಡು..
ಸ್ನೇಹಿತ: 50 ಕೋಟಿನಾ..? ನಮ್ ದೇಶದಲ್ಲಿ ಅಷ್ಟೊಂದು ಹಣ ಸಿಗೋದು ಬಹಳ ಕಷ್ಟ.. ಅದೇ ಪಾಕಿಸ್ತಾನದಲ್ಲಾದ್ರೆ 50 ಕೋಟಿ ಕೊಡ್ತಾರೆ

ತೇಜ್ ಬಹದ್ದೂರ್: ಇಲ್ಲ, ನಾನು ಅಂತಹ ಕೆಲಸ ಮಾಡಲ್ಲ. ನಾನು ನನ್ನ ದೇಶಕ್ಕೆ ನಿಷ್ಠ..
ಸ್ನೇಹಿತ: ಆದರೆ, ಮೋದಿ ಭಾರತದ ಪ್ರಧಾನಿ..
ತೇಜ್ ಬಹದ್ದೂರ್: ಇಲ್ಲ, ನನ್ನ ದೇಶಕ್ಕೆ ನಾನು ವಿಶ್ವಾಸದ್ರೋಹ ಬಗೆಯಲ್ಲ. ಹಣ ನನಗೆ ಒಂದು ವಿಷಯವೇ ಅಲ್ಲ.
ಸ್ನೇಹಿತ: ನಾನು ಇದನ್ನು ಯಾಕೆ ಕೇಳಿದೆ ಅಂದ್ರೆ, 50 ಕೋಟಿ ಕೊಟ್ರೆ ಮೋದಿಯವರನ್ನು ಕೊಲ್ಲುವುದಾಗಿ ನೀನೇ ಹೇಳುತ್ತಾ ಇದ್ದೀಯಲ್ಲ ಅದಕ್ಕೆ.
ತೇಜ್ ಬಹದ್ದೂರ್ : ದೇಶದ ಬಗ್ಗೆ ನನಗಿರುವ ನಿಷ್ಠೆ ಅಚಲ. ಹಾಗಾಗಿ ನಾನು ಭಾರತೀಯರು ಹಣ ಕೊಟ್ಟರೆ ಮಾತ್ರ ಕೆಲಸ ಮಾಡುತ್ತೇನೆ.

ಮೊದಲು ಪಕ್ಷೇತರ ಅಭ್ಯರ್ಥಿಯಾಗಿ ಪ್ರಧಾನಿ ಮೋದಿ ವಿರುದ್ಧ ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ತೇಜ್​ ಬಹದ್ದೂರ್​ ಯಾದವ್​ ಬಳಿಕ ಸಮಾಜವಾದಿ ಪಕ್ಷವನ್ನು ಸೇರಿ ವಾರಾಣಸಿ ಕ್ಷೇತ್ರದಿಂದ ಎಸ್​ಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ, ಮೇ 1ರಂದು ನಾಮಪತ್ರ ರದ್ದಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top