fbpx
ಸಮಾಚಾರ

ಮುದ್ದು ಮಗಳನ್ನು ಕೊನೆಗೂ ಅಭಿಮಾನಿಗಳಿಗೆ ತೋರಿಸಿದ ಯಶ್-ರಾಧಿಕಾ.

ರಾಧಿಕಾ- ಯಶ್ ಅಕ್ಷಯ ತೃತೀಯಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬಹುದಿನಗಳಿಂದ ತಾರಾ ಜೋಡಿಯ ಪುಟಾಣಿಯನ್ನು ನೋಡಬೇಕೆಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಮುದ್ದು ಮಗಳ ಫೋಟೋವನ್ನು ರಿವೀಲ್ ಮಾಡಿದ್ದಾರೆ.

ರಾಧಿಕಾ ಪಂಡಿತ್ ಮತ್ತು ಯಶ್ ಇಬ್ಬರೂ ತಮ್ಮ ಇನ್‍ಸ್ಟಾಗ್ರಾಂ ಹಾಗೂ ಫೇಸ್‍ಬುಕ್‍ನಲ್ಲಿ ಮಗಳ ಫೋಟೋವನ್ನು ಹಂಚಿಕೊಂಡಿದ್ದಾರೆ. ರಾಧಿಕಾ ಮಗುವಿನ ಫೋಟೋ ಹಾಕಿ, “ನಮ್ಮ ಅಮೂಲ್ಯವಾದ ಖುಷಿಯನ್ನು ಪರಿಚಯಿಸುತ್ತಿದ್ದೇವೆ. ನಾವು ಇನ್ನೂ ಮಗುವಿಗೆ ಹೆಸರಿಟ್ಟಿಲ್ಲ. ಹೆಸರು ಇಡುವವರೆಗೂ ಎಲ್ಲರೂ ‘ಬೇಬಿವೈಆರ್’ ಎಂದು ಕರೆಯಿರಿ. ನೀವು ಎಲ್ಲರೂ ಸೇರಿ ನನ್ನ ಮಗಳಿಗೆ ಪ್ರೀತಿ ಹಾಗೂ ಆರ್ಶೀವಾದ ನೀಡಿ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

 

 

ಯಶ್ ಮತ್ತು ರಾಧಿಕಾ ಅವರು 2016 ಡಿಸೆಂಬರ್ 9 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, 2018ರ ಡಿಸೆಂಬರ್ 2ರಂದು ರಾಧಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದುವರೆಗೂ ಮಗಳ ಫೋಟೋವನ್ನು ಯಶ್-ರಾಧಿಕಾ ಎಲ್ಲಿಯೂ ರಿವೀಲ್ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಫೋಟೋವನ್ನು ಬಿಡುಗಡೆ ಮಾಡಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top