fbpx
ಸಮಾಚಾರ

“ರಾಜೀವ್ ಗಾಂಧಿ ಬಗ್ಗೆ ಮೋದಿ ಹಾಗೆ ಹೇಳಬಾರದಿತ್ತು” ಪ್ರಧಾನಿ ವಿರುದ್ಧ ಹರಿಹಾಯ್ದ ರಾಜ್ಯ ಬಿಜೆಪಿ ಹಿರಿಯ ಮುಖಂಡ.

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಭ್ರಷ್ಟಾಚಾರಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ. ಮೈಸೂರಿನ ಬಿಜೆಪಿ ಮುಖಂಡ ವಿ. ಶ್ರೀನಿವಾಸ್​​ ಪ್ರಸಾದ್​​ ಪ್ರಧಾನಿ ಮೋದಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ರಾಜೀವ್‌ಗಾಂಧಿ ಎಂದು ಸಹ ಭ್ರಷ್ಟಾಚಾರದ ಬಗ್ಗೆ ಮಾತನಾಡಿದವರಲ್ಲ. ಭ್ರಷ್ಟಾಚಾರ ಆರೋಪ ಬಂದಾಗ ರಾಜಕೀಯ ಬಿಟ್ಟು ಎಲ್ಲಾದ್ರೂ ಹೋಗ್ತಿನಿ ಎಂದಿದ್ರು. ರಾಜೀವ್ ಅವರನ್ನು ದೆಹಲಿ ಹೈಕೋರ್ಟ್ ಸಹ ಆರೋಪ ಮುಕ್ತ ಮಾಡಿದೆ. ಅಂತವರ ಬಗ್ಗೆ ಮೋದಿ ಲಖ್ನೋದಲ್ಲಿ ಮಾತನಾಡಿರೋದು ಸರಿಯಲ್ಲ.”

ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗಲೇ ಹುತಾತ್ಮರಾದವರು. ಅವರು ದೇಶದ ಅಭಿವೃದ್ಧಿಗಾಗಿ ಮಹತ್ವದ ಕೊಡುಗೆ ನೀಡಿದ್ದಾರೆ. ಮಾಜಿ ಪ್ರಧಾನಿ ವಾಜಪೇಯಿ ಅವರು ರಾಜೀವ್​ ಬಗ್ಗೆ ಒಳ್ಳೆಯ ಮಾತನಾಡಿದ್ದರು. ಅವರ ಬಗ್ಗೆ ಪ್ರಧಾನಿ ಹುದ್ದೆಯಲ್ಲಿರುವ ವ್ಯಕ್ತಿ ಕೀಳಾಗಿ ಮಾತನಾಡುವುದು ಸರಿಯಲ್ಲ. ರಾಜೀವ್​ ಗಾಂಧಿ ಸತ್ತಿದ್ದು ದೇಶಕ್ಕೋಸ್ಕರ. ಅಂತಹ ತ್ಯಾಗ ಮಾಡಿರುವವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವುದು ಸರಿಯಲ್ಲ,” ಎಂದು ಹೇಳಿದ್ದಾರೆ.

ಮೋದಿ ಹೇಳಿದ್ದೇನು?
ಉತ್ತರ ಪ್ರದೇಶದ ಲಕ್ನೋದಲ್ಲಿ ಇತ್ತೀಚೆಗೆ ಚುನಾವಣಾ ಪ್ರಚಾರ ನಡೆಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿಯನ್ನು ಟೀಕಿಸುವ ಭರದಲ್ಲಿ ‘ನಿಮ್ಮ ತಂದೆ (ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಮಿಸ್ಟರ್ ಕ್ಲೀನ್ ಎಂದು ನಿಮ್ಮ ಕುಟುಂಬಕ್ಕೆ ಆಪ್ತರಾಗಿರುವವರು ಹೇಳುತ್ತಾರೆ. ಆದರೆ, ನಿಮ್ಮ ತಂದೆಯ ಬದುಕು ಭ್ರಷ್ಟಾಚಾರಿ ನಂಬರ್ 1 ಹಣೆಪಟ್ಟಿಯೊಂದಿಗೆ ಅಂತ್ಯವಾಯಿತು’ ಎಂದು ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top