fbpx
ಸಮಾಚಾರ

ರಾಜೀವ್‌ ಗಾಂಧಿ ಭ್ರಷ್ಟಾಚಾರಿ ಹೇಳಿಕೆ: ಮೋದಿ ವಿರುದ್ಧ ಶಿವಸೇನೆ ಆಕ್ರೋಶ.

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಭ್ರಷ್ಟಾಚಾರಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಎನ್ ಡಿಎ ಅಂಗಪಕ್ಷ ಶಿವಸೇನೆ ಕಿಡಿಕಾರಿದೆ. ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಈ ಕುರಿತು ಶಿವಸೇನೆ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಸಾಮ್ನಾದ ಸಂಪಾದಕೀಯದಲ್ಲಿ ಮೋದಿ ವಿರುದ್ಧ ಶಿವಸೇನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

“ಪ್ರಧಾನಮಂತ್ರಿ ನರೇಂದ್ರ ಮೋದಿ ಈ ರೀತಿಯಾಗಿ ಹೇಳಬಾರದಿತ್ತು, ರಾಜೀವ್‌ ಗಾಂಧಿ ಅವರನ್ನು ಭ್ರಷ್ಟಾಚಾರಿ ಎಂದು ಸಂಬೋಧಿಸಬಾರದಿತ್ತು .ರಾಜೀವ್ ಗಾಂಧಿ ಬಗ್ಗೆ ನರೇಂದ್ರ ಮೋದಿ ನೀಡಿರುವ ಹೇಳಿಕೆ ತಪ್ಪಿನಿಂದ ಕೂಡಿದೆ. ರಾಜೀವ್ ಗಾಂಧಿ ತಮಿಳು ಉಗ್ರರಿಂದ ಮೃತಪಟ್ಟಿದ್ದು, ಎಲ್ಲರಿಗೂ ದು:ಖ ತಂದಿದೆ.ರಾಜೀವ್ ಗಾಂಧಿ ದೇಶಕ್ಕಾಗಿ ದೊಡ್ಡ ಕೆಲಸ ಮಾಡದಿದ್ದರೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು, ಇಂದಿರಾ ಗಾಂಧಿ ನಂತರ ಪ್ರಧಾನಿಯಾದ ರಾಜೀವ್ ಗಾಂಧಿ ಚಿಕ್ಕವಯಸ್ಸಿನಲ್ಲಿಯೇ ಮೃತಪಟ್ಟರು. ರಾಜೀವ್ ಬಗ್ಗೆ ಮೋದಿ ” ಎಂದು ಸಂಪಾದಕೀಯದಲ್ಲಿ ತಿಳಿಸಲಾಗಿದೆ.

ಮೋದಿ ಹೇಳಿದ್ದೇನು?
ಉತ್ತರ ಪ್ರದೇಶದ ಲಕ್ನೋದಲ್ಲಿ ಇತ್ತೀಚೆಗೆ ಚುನಾವಣಾ ಪ್ರಚಾರ ನಡೆಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿಯನ್ನು ಟೀಕಿಸುವ ಭರದಲ್ಲಿ ‘ನಿಮ್ಮ ತಂದೆ (ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಮಿಸ್ಟರ್ ಕ್ಲೀನ್ ಎಂದು ನಿಮ್ಮ ಕುಟುಂಬಕ್ಕೆ ಆಪ್ತರಾಗಿರುವವರು ಹೇಳುತ್ತಾರೆ. ಆದರೆ, ನಿಮ್ಮ ತಂದೆಯ ಬದುಕು ಭ್ರಷ್ಟಾಚಾರಿ ನಂಬರ್ 1 ಹಣೆಪಟ್ಟಿಯೊಂದಿಗೆ ಅಂತ್ಯವಾಯಿತು’ ಎಂದು ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top