fbpx
ಸಮಾಚಾರ

ಲಂಕಾದಲ್ಲಿ ತೀವ್ರಗೊಂಡ ಕೋಮು ಗಲಭೆ, ಮಸೀದಿ ಮೇಲೆ ದಾಳಿ- ಶಾಂತಿ ಸ್ಥಾಪನೆಗಾಗಿ ಸಾಮಾಜಿಕ ಜಾಲತಾಣಗಳ ನಿಷೇಧ.

ಶ್ರೀಲಂಕಾದಲ್ಲಿ ಚರ್ಚ್ ಮೇಲೆ ಆತ್ಮಹತ್ಯಾ ದಾಳಿ ನಡೆದ ನಂತರ ದೇಶದೆಲ್ಲೆಡೆ ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಪರ ಹಾಗೂ ವಿರೋಧಿ ಪೋಸ್ಟ್​ಗಳು ವೈರಲ್ ಆಗುತ್ತಿರುವ ಹಿನ್ನೆಲೆ ಮುಸ್ಲಿಮರ ಮೇಲೆ ಅಲ್ಲಲ್ಲಿ ನಿರಂತರ ದಾಳಿಗಳು ನಡೆಯುತ್ತಿದೆ. ಮಸೀದಿ ಹಾಗೂ ಮುಸ್ಲಿಂ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ಹೆಚ್ಚಾಗುತ್ತಿದೆ. ಹೀಗಾಗಿ ತಾತ್ಕಾಲಿಕವಾಗಿ ಶ್ರೀಲಂಕಾದಲ್ಲಿ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಲಾಗಿದೆ.

ಈಸ್ಟರ್ ದಿನದಂದು ಸಂಭವಿಸಿದ ಬಾಂಬ್ ದಾಳಿಯಲ್ಲಿ 290ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಇದಾದ ಬಳಿಕ ಮಸೀದಿ ಹಾಗೂ ಮುಸ್ಲಿಂ ವ್ಯಾಪಾರಿಗಳ ಮೇಲೆ ದಾಳಿಗಳು ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಈಗ ಶ್ರೀಲಂಕಾ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀಲಂಕಾ ಪೊಲೀಸ್ ಇಲಾಖೆ, “ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ, ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಹೇಳಿಕೆಗಳನ್ನು ತಡೆಯಲು ಫೇಸ್​ಬುಕ್​ ಹಾಗೂ ವಾಟ್ಸಾಪ್​ಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top