fbpx
ಸಮಾಚಾರ

“ನಾನೇ ಗೆಲ್ಲುತ್ತೇನೆ ಎಂಬ ಅತಿಯಾದ ಆತ್ಮವಿಶ್ವಾಸವಿಲ್ಲ” ಸುಮಲತಾ ಹೇಳಿಕೆ.

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಇಡೀ ಇಂಡಿಯಾವೇ ಮಂಡ್ಯ ಮೇಲೆ ಕಣ್ಣು ನೆಟ್ಟಿತ್ತು. ಅದರಂತೆ ಮಂಡ್ಯದಲ್ಲಿ ದಾಖಲೆಯ ಶೇಕಡ 80ರಷ್ಟು ಮತದಾನ ಕೂಡ ಆಗಿದೆ. ಮತದಾನ ನಂತರ ಮಂಡ್ಯದಲ್ಲಿ ಹಲವಾರು ಬೆಳವಣಿಗೆಗಳು ಮಂಡ್ಯದಲ್ಲಿ ನಡೆಯುತ್ತಿವೆ.

ಮಂಗಳವಾರ ನಡೆದ ‘ಡಾಟರ್‌ ಆಫ್‌ ಪಾರ್ವತಮ್ಮ’ ಚಿತ್ರದ ಟ್ರೇಲರ್ ಮತ್ತು ಆಡಿಯೊ ಬಿಡುಗಡೆಯ ಬಳಿಕ ಮಾತನಾಡಿದ ಸುಮಲತಾ “ನಾನೇ ಗೆಲ್ಲುತ್ತೇನೆ ಎನ್ನುವ ಅತಿಯಾದ ಆತ್ಮವಿಶ್ವಾಸ ಇಲ್ಲ. ಇಷ್ಟೇ ಮತಗಳ ಅಂತರದಿಂದ ಜಯಿಸುತ್ತೇನೆ ಎಂದು ಹೇಳಲಾರೆ. ಆದರೆ, ನನ್ನ ಪರವಾಗಿ ಪಾಸಿಟಿವ್‌ ಅಲೆಯಿದೆ. ಚುನಾವಣಾ ಪ್ರಚಾರ ಮತ್ತು ಮತದಾನದ ದಿನದಂದು ಆ ಸುಳಿವು ನನಗೆ ಸಿಕ್ಕಿದೆ. ಜನರ ಪ್ರತಿಕ್ರಿಯೆ ನೋಡಿದರೆ ಗೆಲ್ಲುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.

ಫಲಿತಾಂಶದ ಬಗ್ಗೆ ನಾವು ಯಾವುದೇ ಸಮೀಕ್ಷೆ ನಡೆಸಿಲ್ಲ. ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆ ಇಲ್ಲ. ಪ್ರತಿದಿನವೂ ಒಂದೊಂದು ಸಮೀಕ್ಷಾ ವರದಿ ಪ್ರಕಟವಾಗುತ್ತಿದೆ. ಅದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಮಂಡ್ಯದ ಮತದಾರರ ಮೇಲೆ ನನಗೆ ಭರವಸೆ ಇದೆ. ಜನರ ಅಭಿಪ್ರಾಯವನ್ನು ಕ್ರೋಡೀಕರಿಸಲಾಗಿದೆ. ಫಲಿತಾಂಶ ನನ್ನ ಪರವಾಗಿಯೇ ಬರುವ ನಂಬಿಕೆಯಿದೆ’ ಎಂದು ಹೇಳಿದರು.

ಅಂದಹಾಗೆ ಮಂಡ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬ ಲೆಕ್ಕಾಚಾರಗಳು ತೀವ್ರವಾಗಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲೇಬೇಕೆಂದು ಪಣತೊಟ್ಟು ಮಂಡ್ಯದಲ್ಲಿ ಪ್ರಚಾರ ನಡೆಸಿದ್ದಾರೆ. ಇದು ಅವರ ಪಾಲಿಗೆ ಅತ್ಯಂತ ಪ್ರತಿಷ್ಠೆಯ ಚುನಾವಣೆ. ಹಾಗೆಂದು ಅವರಿಗೆ ಮಂಡ್ಯದಲ್ಲಿನ ಗೆಲುವು ಸುಲಭವಲ್ಲ. ಅವರ ಎದುರು ಇರುವುದು ಪಕ್ಷೇತರ ಅಭ್ಯರ್ಥಿಯಾಗಿ ನಿಂತಿರುವ ಸುಮಲತಾ ಅಂಬರೀಷ್. ಅವರಿಗೆ ಬಿಜೆಪಿಯ ಬೆಂಬಲ ದೊರಕಿದೆ. ಕಾಂಗ್ರೆಸ್‌ನ ಅತೃಪ್ತ ಮುಖಂಡರು ಕೂಡ ಅವರೊಂದಿಗೆ ಕೈ ಜೋಡಿಸಿದ್ದಾರೆ. ಹೀಗಾಗಿ ಇಲ್ಲಿ ನಿಕಟ ಪೈಪೋಟಿ ಇದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top