fbpx
ಸಮಾಚಾರ

“ಕುಮಾರಸ್ವಾಮಿ ರಾಜೀನಾಮೆ ನೀಡಿ, ಖರ್ಗೆ ಸಿಎಂ ಆಗಲಿ” ಬಿಎಸ್ ಯಡಿಯೂರಪ್ಪ.

ಮಲ್ಲಿಕಾರ್ಜುನ ಖರ್ಗೆ ಯಾವಾಗಲೂ ಮುಖ್ಯಮಂತ್ರಿಯಾಗಬೇಕಿತ್ತು ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯಿಸಿ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಚಿಂಚೋಳಿಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತ ಮುಖ್ಯಮಂತ್ರಿ ಕುಮಾರಸ್ವಾಮಿ, ‘ಖರ್ಗೆಯಂತಹ ದೊಡ್ಡ ನಾಯಕರನ್ನು ಕಳೆದುಕೊಳ್ಳಬೇಡಿ. ಅವರು ಎಂದೋ ಮುಖ್ಯಮಂತ್ರಿಯಾಗಬೇಕಿದ್ದವರು. ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ದರೆ ಸಮ್ಮಿಶ್ರದ ಸರಕಾರದ ಮುಖ್ಯಮಂತ್ರಿ ಅವರೇ ಆಗುತ್ತಿದ್ದರು’ ಎಂದು ಹೇಳಿಕೆ ನೀಡಿದ್ದರು.

ಕಲಬುರಗಿಯಲ್ಲಿ ಮಾತನಾಡಿದ ಯಡಿಯೂರಪ್ಪ, “ವೇದಿಕೆ ಮೇಲಿನಿಂದ ಮೊಸಳೆ ಕಣ್ಣೀರು ಸುರಿಸುವ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಳೆಯೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ. ಈ ಮೂಲಕ ಕುಮಾರಸ್ವಾಮಿ ತಮ್ಮ ಕನಸು ನನಸಾಗಿಸಿಕೊಳ್ಳಲಿ” ಎಂದು ಯಡಿಯೂರಪ್ಪ ಹೇಳಿದ್ದಾರೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top