fbpx
ಸಮಾಚಾರ

‘ಮಂಡ್ಯದಲ್ಲಿ ನಿಖಿಲ್ ವಿರುದ್ಧ ಸುಮಲತಾರನ್ನ ಕಣಕ್ಕಿಳಿಸಿದ್ದೇ ಸಿದ್ದರಾಮಯ್ಯ’

ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಸುಮಲತಾ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದು ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಸುಮಲತಾ ಅಂಬರೀಶ್​ ಸ್ಪರ್ಧೆ ಹಿಂದೆ ಸಿದ್ದರಾಮಯ್ಯ ಇದ್ದಾರೆ. ಪಕ್ಷೇತರವಾಗಿ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯನವರೇ ಹೇಳಿದ್ದಾರೆ. ಸಿದ್ದರಾಮಯ್ಯ ಆಪ್ತರೆಲ್ಲ ಸುಮಲತಾ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದೆ ಇದಕ್ಕೆ ಸಾಕ್ಷಿ. ನಿಖಿಲ್​​ ಕುಮಾರಸ್ವಾಮಿ ಗೆದ್ದು ಬರುವುದು ಸಿದ್ದರಾಮಯ್ಯಗೆ ಇಷ್ಟವಿಲ್ಲ ಹಾಗಾಗಿ ಸುಮಲತಾರನ್ನು ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಹೇಳಿದ್ದಾರೆ.” ಎಂದು ಹೇಳಿದ್ದಾರೆ.

ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೈಂ ಬಾಂಬ್‌ ಫಿಕ್ಸ್‌ ಮಾಡಿದ್ದಾರೆ. ಅದರ ಬಟನ್‌ ಅವರ ಕೈಯಲ್ಲಿದೆ. 23ರ ಫಲಿತಾಂಶ ನಂತರ ಒತ್ತುತ್ತಾರೆ ಆಗ ಈ ಸರ್ಕಾರ ಪತನವಾಗಲಿದೆ, ಅಲ್ಲಿಗೆ ಸಿದ್ದರಾಮಯ್ಯ ನಾಟಕ ಕೂಡ ಅಂತ್ಯವಾಗಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ, ಸಿಎಂ ಎಚ್​.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಶೆಟ್ಟರ್​, ವಿಶ್ವನಾಥ ಹೇಳಿಕೆ ಹಿಂದಿನ ನಿರ್ದೇಶಕ ಕುಮಾರಸ್ವಾಮಿ. ಕುಮಾರಸ್ವಾಮಿ ತಾವು ಹೇಳಲು ಆಗದ್ದನ್ನು ವಿಶ್ವನಾಥ ಮೂಲಕ ಹೇಳಿಸಿದ್ದಾರೆ ಎಂದು ಜರಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top