fbpx
ಸಮಾಚಾರ

ಸಿಎಂ ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ” ಮಾಜಿ ಸಿಎಂ ಸಿದ್ದರಾಮಯ್ಯ.

‘ಸಚಿವ ಎಚ್‌.ಡಿ.ರೇವಣ್ಣ ಅವರಿಗೂ ಕೂಡ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್‌ ನೀಡಿದ್ದಾರೆ. ‌‘ಮಲ್ಲಿಕಾರ್ಜುನ ಖರ್ಗೆ ಎಂದೋ ಮುಖ್ಯಮಂತ್ರಿ ಆಗಬೇಕಿತ್ತು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚಿಗೆ ಹೇಳಿಕೆ ನೀಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ”ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ‌ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ‌ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ‌ ಕೂಡಿ ಬರಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

 

 

ಈ ಹಿಂದೆ ಸಿಎಂ ಕುಮಾರಸ್ವಾಮಿ ಉಪ ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಿಎಂ ಸ್ಥಾನಕ್ಕೆ ಅರ್ಹರು ಎಂದು ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ಮಾತಿನ ಚಾಟಿ ಬೀಸಿದ್ದರು. ಈ ಹೇಳಿಕೆಯ ಮೂಲಕ ಸಿದ್ದರಾಮಯ್ಯ ಮತ್ತೆ ಸಿಎಂ ಕೂಗಿಗೆ ಟಾಂಗ್ ನೀಡಿದ್ದರು. ಇದೀಗ ಸಿಎಂ ಮಾತಿನೇಟಿಗೆ ಸಿದ್ದರಾಮಯ್ಯನವರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಇನ್ನು ಕುಮಾರಸ್ವಾಮಿ ಹೇಳಿಕೆ ಕುರಿತು ಬುಧವಾರ ಪ್ರತಿಕ್ರಿಸಿದ್ದ ಬಿ.ಎಸ್‌.ಯಡಿಯೂರಪ್ಪ, ‘ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ. ನಾಳೆಯೇ ರಾಜೀನಾಮೆ ನೀಡಿ ತಮ್ಮ ಕನಸು ನನಸಾಗಿಸಿಕೊಳ್ಳಲಿ’ ಎಂದು ಸವಾಲು ಹಾಕಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top