fbpx
ಸಮಾಚಾರ

ಪ್ರೊ. ಕೆ ಎಸ್ ಭಗವಾನ್ ತೀವ್ರ ಅಸ್ವಸ್ಥ- ಆಸ್ಪತ್ರೆಗೆ ದಾಖಲು.

ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್‌ ಅವರು ವಾಕಿಂಗ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಸಂಜೆ ವಾಕಿಂಗ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಭಗವಾನ್‌ರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಲಘು ಹೃದಯಾಘತದಿಂದಾಗಿ ಕುಸಿದು ಬಿದ್ದಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಸುಯೋಗ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಸಾಮಾಜಿಕ ವಿದ್ಯಮಾನಗಳ ಬಗ್ಗೆ ತಮ್ಮ ನಿಲುವನ್ನು ನಿರ್ಬಿಢೆಯಿಂದ ಮಂಡಿಸುತ್ತಲೇ ಒಂದು ಪಂಥದವರ ವಿರೋಧವನ್ನೂ ಕಟ್ಟಿಕೊಂಡಿರುವವರು ಪ್ರಗತಿಪರ ಚಿಂತಕ, ಹಿರಿಯ ಸಾಹಿತಿ ಪ್ರೊ. ಕೆ.ಎಸ್ ಭಗವಾನ್​.. ನಿವೃತ್ತಿ ಇಂಗ್ಲಿಶ್ ಪ್ರೊಸೆಸರ್ ಕೆ.ಎಸ್‌.ಭಗವಾಜ್ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಸರಳ ಮದುವೆ ಚಳವಳಿಯಲ್ಲಿ ನೂರಾರು ವಿವಾಹಗಳನ್ನು ನೆರವೇರಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top