fbpx
ಸಮಾಚಾರ

ನೀರು ಉಳಿಸಲು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೊಸ ಪ್ಲಾನ್.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಕೊರತೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ನೇತ್ರಾವತಿ ನದಿಗೆ ಧರ್ಮಸ್ಥಳದ ಬಳಿ ಮತ್ತೊಂದು ಚೆಕ್ ಡ್ಯಾಮ್ ನಿರ್ವಿುಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ರಾಜ್ಯ ಸರ್ಕಾರವನ್ನು ಮನವಿ ಮಾಡಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವುದನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗಂಭೀರವಾಗಿ ಪರಿಗಣಿಸಿದ್ದು, ಅವರ ಸಲಹೆ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಸಮಾಲೋಚನೆ ನಡೆಸಿದರು.

ನೇತ್ರಾವತಿ ನದಿಯಲ್ಲಿ ನೀರಿನ ಕೊರತೆ ಇದೆ. ಹೀಗಾಗಿ, ನೇತ್ರಾವತಿ ನದಿಗೆ ಮತ್ತೊಂದು ಚೆಕ್‌ ಡ್ಯಾಂ ನಿರ್ಮಾಣ ಮಾಡುವ ಅಗತ್ಯ ಇದೆ ಎಂದು ಧರ್ಮಾಧಿಕಾರಿಗಳು ಮುಖ್ಯ ಕಾರ್ಯದರ್ಶಿಗೆ ಸಲಹೆ ನೀಡಿದ್ದಾರೆ. ಜೊತೆಗೆ ಸರ್ಕಾರದ ಕಳಕಳಿಗೆ ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಹೆಗ್ಗಡೆ ಯವರ ಜೊತೆ ಸೋಮವಾರ ಚರ್ಚೆ ನಡೆಸಿದರು. ಮುಖ್ಯ ಕಾರ್ದರ್ಶಿಯವರ ಸೂಚನೆಯಂತೆ ಅಧಿಕಾರಿಗಳ ತಂಡದ ಜೊತೆ ಧರ್ಮಸ್ಥಳಕ್ಕೆ ತೆರಳಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆರ್‌. ಸೆಲ್ವಮಣಿ ಸ್ಥಳ ಪರಿಶೀಲನೆ ನಡೆಸಿದರು.‘ನೆರಿಯಾ ಹೊಳೆಗೆ ಚೆಕ್‌ಡ್ಯಾಂ ನಿರ್ಮಿಸುವ ಕುರಿತಂತೆ ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಸೆಲ್ವಮಣಿ ತಿಳಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top