fbpx
ಸಮಾಚಾರ

ಸಿದ್ದರಾಮಯ್ಯ, ದಿನೇಶ್ ವಿರುದ್ಧಹೇಳಿಕೆ- ರೋಷನ್ ಬೇಗ್​ಗೆ ಸಂಕಷ್ಟ..!

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ದ ಪಕ್ಷ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ರೋಷನ್ ಬೇಗ್ ಗೆ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ.

ಅಲ್ಲದೇ ಮಾಧ್ಯಮಗಳಲ್ಲಿ ಪಕ್ಷದ ನಾಯಕರ ಬಗ್ಗೆ ಮನಬಂದಂತೆ ಹೇಳಿಕೆ ನೀಡಿದ್ದರ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ಜತೆಗೆ ರೋಷನ್​​ ಬೇಗ್ ಪಕ್ಷವಿರೋಧಿ ಚಟುವಟಿಕೆ ಮಾಡಿದಲ್ಲಿ ಕಾಂಗ್ರೆಸ್ ಕ್ರಮ ಕೈಗೊಳ್ಳಲಿದೆ ಎಂದು ಖಡಕ್​ ಸೂಚನೆ ನೀಡಲಾಗಿದೆ. ನೊಟೀಸಿಗೆ 7 ದಿನಗಳ ಒಳಗಾಗಿ ಉತ್ತರಿಸದಿದ್ದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಇಂದು ನೊಟೀಸ್ ಜಾರಿ ಮಾಡಲಾಗಿದ್ದು, ಸೂಕ್ತ ಹಾಗೂ ಸಮಂಜಸ ಉತ್ತರ ನೀಡದಿದ್ದಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವದಲ್ಲಿ ಅಮಾನತ್ತು ಅಥವಾ ಉಚ್ಛಾಟನೆಯನ್ನು ಮಾಡುವ ಎಚ್ಚರಿಕೆ ನೀಡಲಾಗಿದೆ.

 

ರೋಷನ್ ಹೇಳಿದ್ದು ಏನು?
ಲೋಕಸಭಾ ಚುನಾವಣಾ ಪ್ರಚಾರದ ಬಗ್ಗೆ ತೀರಾ ಅಸಮಾಧಾನ ವ್ಯಕ್ತಪಡಿಸಿದ ಬೇಗ್, ಒಂದು ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸೋತರೆ ಅದಕ್ಕೆ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರೇ ನೇರ ಕಾರಣ.. ವೇಣುಗೋಪಾಲ್‌ ಅವರಂತಹ ಬಫೂನ್, ಸಿದ್ದರಾಮಯ್ಯ ಅವರಂತಹ ಅಹಂಕಾರಿ ಮತ್ತ ದಿನೇಶ್ ಗುಂಡೂರಾವ್ ಅವರಂತಹ ಪ್ಲಾಫ್ ಅಧ್ಯಕ್ಷರಿಂದ ಕಾಂಗ್ರೆಸ್ ಉದ್ಧಾರ ಆಗಲ್ಲ. ಚುನಾವಣಾ ನಾಯಕತ್ವ ವಹಿಸಿದ್ದ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರೂ ಸಹ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top