fbpx
ಸಮಾಚಾರ

ಮಂಡ್ಯದಲ್ಲಿ ಸುಮಲತಾ ಮುನ್ನಡೆ.

ಲೋಕಸಭೆ ಚುನಾವಣಾ ಫಲಿತಾಂಶವು ಕರ್ನಾಟಕದಲ್ಲಿ, ವಿಶೇಷವಾಗಿ ಮಂಡ್ಯದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯದ ಗಮನ ಸೆಳೆದಿರುವ ಮಂಡ್ಯದ್ಲಲಿ ಸದ್ಯ ಸುಮಲತಾ ಮುನ್ನಡೆ ಸಾಧಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 1296 ಮತಗಳ ಮುನ್ನಡೆ ಸಾಧಿಸಿದ್ದಾರೆ. ಎರಡನೇ ಸುತ್ತಿನ ಮತ ಎಣಿಕೆಯ ನಂತರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ 56755 ಮತಗಳನ್ನು ಪಡೆದಿದ್ದರೇ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಷ್ 58051 ಪಡೆದಿದ್ದು ಈ ಮೂಲಕ 1296 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಮಂಡ್ಯ-ಮೈಸೂರು ಹೆದ್ದಾರಿಯಲ್ಲಿರುವ ಯೂನಿಟರಿ ಯೂನಿವರ್ಸಿಟಿ ಆವರಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಸುಮಲತಾ ಬೆಂಬಲಿಗರಾಗಿರುವ ರಾಕ್‌ಲೈನ್ ವೆಂಕಟೇಶ್ ಆಗಮಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top