fbpx
ಸಮಾಚಾರ

ಫಲಿತಾಂಶ ಪ್ರಕಟವಾಗುವ ಮುನ್ನವೇ ಸಂಸದರಾದ ನಿಖಿಲ್- ಆಹ್ವಾನ ಪತ್ರಿಕೆಯಲ್ಲಿ ಪ್ರಕಟಣೆ.

ಲೋಕಸಭಾ ಫಲಿತಾಂಶ ಹೊರ ಬೀಳಲು ಕ್ಷಣಗಣನೆ ಶುರುವಾಗಿದ್ದು ಫಲಿತಾಂಶ ಹೊರಬೀಳುವ ಮುನ್ನವೇ ನಿಖಿಲ್​ ಕುಮಾರಸ್ವಾಮಿ ಸಂಸದರಾಗಿದ್ದಾರೆ ? ಹೌದು ಇಂತಹ ವಿಚಿತ್ರವೊಂದು ಶ್ರೀರಂಗಪಟ್ಟಣದ ಜೆಡಿಎಸ್ ಹಾಗೂ ನಿಖಿಲ್ ಅಭಿಮಾನಿಯ “ಲಗ್ನಪತ್ರಿಕೆ” ಈ ಎಡವಟ್ಟು ಬೆಳಕಿಗೆ ಬಂದಿದೆ. ಆಹ್ವಾನ ಪತ್ರಿಕೆಯಲ್ಲಿ ‘ವಿಶೇಷ ಆಹ್ವಾನಿತರು ಕೆ.ನಿಖಿಲ್‌ ಕುಮಾರಸ್ವಾಮಿ, ಸಂಸದರು, ಮಂಡ್ಯ ಜಿಲ್ಲೆ’ ಎಂದು ಭಾವಚಿತ್ರದೊಂದಿಗೆ ಮುದ್ರಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

 

 

 

ಜೂ.9 ರಂದು ಶ್ರೀರಂಗಪಟ್ಟಣದಲ್ಲಿ ಮದುವೆ ನಡೆಯಲಿದ್ದು, ಈ ಮದುವೆಯ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಲೋಕಚುನಾವಣೆಯಲ್ಲಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಹಾಗೂ ಮೈತ್ರಿ ಅಭ್ಯರ್ಥಿ ಆಗಿರುವ ನಿಖಿಲ್ ಅವರ ನಡುವೆ ಬಿಗ್ ಫೈಟ್ ನಡೆದಿದ್ದು, ಫಲಿತಾಂಶ ಏನಾಗಲಿದೆ ಎಂಬುವುದರ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿದೆ.

ಈ ಹಿಂದೆ ಚುನಾವಣೆ ಮುಗಿದ ವೇಳೆ ನಿಖಿಲ್ ಕುಮಾರಸ್ವಾಮಿ ಮಂಡ್ಯ ಸಂಸದರು ಎಂಬ ನಾಮಫಲಕ ಉಡುಗೋರೆ ನೀಡಿದ್ದರು. ಇದೀಗ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿದ್ದು, ಫಲಿತಾಂಶ ಬಂದ ಮೇಲಷ್ಟೇ ಎಲ್ಲಾ ಕುತೂಹಲಕ್ಕೂ ತೆರೆ ಬೀಳಲಿದೆ. ಹಾಗೆಯೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋವನ್ನು ಹಾಗೂ ಮೋದಿಗೆ ಮತ ಚಲಾಯಿಸಿ ಎಂಬ ಲಗ್ನಪತ್ರಿಕೆಗಳು ಪ್ರಕಟವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top