fbpx
ಸಮಾಚಾರ

ನಡೆದಾಡುವ ದೇವರಿಗೆ ‘ಭಾರತ ರತ್ನ’ ನೀಡಲು ಆಗ್ರಹಿಸಿ ಮೋದಿಗೆ ಮತ್ತೆ ಪತ್ರ ಬರೆದ ಸಿಎಂ ಎಚ್‌ಡಿಕೆ.

ನಡೆದಾಡುವ ದೇವರು ಎಂದು ವಿಶ್ವಾದ್ಯಂತ ಪ್ರಸಿದ್ಧರಾಗಿದ್ದ ಲಿಂಗೈಕ್ಯ ಸಿದ್ಧಗಂಗಾ ಮಠದ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ‘ಭಾರತ ರತ್ನ’ ಘೋಷಿಸುವಂತೆ ಕೋರಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರಧನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪ್ರಧಾನಿಗೆ ಕುಮಾರಸ್ವಾಮಿ ಅವರು ಬರೆದಿರುವ ಪತ್ರವನ್ನು ಮುಖ್ಯಮಂತ್ರಿಗಳ ಕಚೇರಿ ಸೋಮವಾರ ಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ.

 

 

ಸಿದ್ದಗಂಗಾ ಮಠ ಸುಮಾರು 600 ವರ್ಷಗಳ ಇತಿಹಾಸ ಹೊಂದಿದೆ. 1941ರಲ್ಲಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರು ಮಠದ ಜವಾಬ್ದಾರಿಯನ್ನು ಸ್ವೀಕಾರ ಮಾಡಿದ್ದರು. 1908ರ ಏಪ್ರಿಲ್ 1ರಂದು ಶಿವಕುಮಾರ ಸ್ವಾಮೀಜಿಗಳು ಜನಿಸಿದ್ದು ಅವರು ಲಿಂಗೈಕ್ಯರಾಗುವವರೆಗೂ ಮಠವನ್ನು ಮುನ್ನಡೆಸಿ, ಸಾಮಾಜಿಕ ಸೇವೆಯಲ್ಲಿ ಮಾದರಿ ಎನಿಸುವ ಕಾರ್ಯ ಮಾಡಿದ್ದಾರೆ.

ಸಿದ್ಧಗಂಗ ಶ್ರೀಗಳು ತ್ರಿವಿಧ ದಾಸೋಹಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ಸಿದ್ಧಗಂಗಾ ಶ್ರೀಗಳು ಸಮಾಜಕ್ಕೆ ಸಲ್ಲಿಸಿರುವ ಸೇವೆಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಸಲ್ಲುವುದು ಉಚಿತ. ಎಲ್ಲ ನಾಗರಿಕರು, ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಆಶಯವೂ ಅದೇ ಆಗಿದೆ. ಆದ್ದರಿಂದ ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಲಿಂಗೈಕ್ಯ ಶಿವಕುಮಾರಸ್ವಾಮೀಜಿಗಳ ಹೆಸರನ್ನು ಮರಣೋತ್ತರ ಭಾರತ ರತ್ನ ಪ್ರಶಸ್ತಿಗೆ ಪರಿಗಣಿಸಬೇಕು ಎಂದು ನಾನು ಮನವಿ ಮಾಡುತ್ತೇನೆ,’ ಎಂದು ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top