fbpx
ಸಮಾಚಾರ

ನೆನ್ನೆ ಮೊನ್ನೆ ಬಂದವರಿಗೆ ಪಕ್ಷದಲ್ಲಿ ಮಣೆ” ವರಿಷ್ಠರ ವಿರುದ್ಧ ರಾಮಲಿಂಗಾರೆಡ್ಡಿ ಗರಂ.

ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ಧ ರೋಷನ್ ಬೇಗ್ ರಾಜಾರೋಷವಾಗಿ ಹೇಳಿಕೆ ನೀಡಿದ ನಂತರ ಈಗ ಮತ್ತೊಬ್ಬ ದೊಡ್ಡ ನಾಯಕರು ಸಿಡಿದೆದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಆಧಾರ ಸ್ತಂಬವೆನಿಸಿರುವ ರಾಮಲಿಂಗಾ ರೆಡ್ಡಿ ಅವರು ಪಕ್ಷ ಬಿಡಲು ತಯಾರಾಗಿದ್ದಾರೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದರೂ ತಮಗೆ ಸಚಿವ ಸ್ಥಾನ ಸಿಕ್ಕಿಲ್ಲವೆಂಬ ಅಸಮಾಧಾನ ರಾಮಲಿಂಗಾ ರೆಡ್ಡಿ ಅವರಲ್ಲಿದೆ.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಭೇಟಿ ವೇಳೆ ಈ ಅಸಮಾಧಾನ ಹೊರಹಾಕಿರುವ ಅವರು ಸರಕಾರ ಉಳಿಸಿಕೊಳ್ಳಬೇಕೆಂಬ ಒಂದೇ ಒಂದು ಕಾರಣಕ್ಕಾಗಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರು ಹಾಗೂ ನಿಷ್ಠಾವಂತರನ್ನು ಸಂಪೂರ್ಣ ನಿರ್ಲಕ್ಷ ಮಾಡಲಾಗುತ್ತಿದೆ. ಇದು ಸರಿಯಾದ ಬೆಳವಣಿಗೆಯಲ್ಲ ಎಂದು ಹೇಳಿದರೇ

‘ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು’ ಎಂದು ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಮಂಗಳವಾರ ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ರಾಮಲಿಂಗ ರೆಡ್ಡಿ ಮಾಡಿರುವ ಟ್ವೀಟ್ ಸಾರಾಂಶ ಈ ರೀತಿ ಇವೆ.
ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು. ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರುವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಸಹ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು.

ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ಪಕ್ಷದ ಕುರಿತು ಏನೂ ಅರಿವಿಲ್ಲದೇ ಬಂದ ಹೊಸಬರಿಗೆ,ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಈ ಪರಿಸ್ಥಿತಿಗೆ ಕಾರಣ. ರಾಜ್ಯದ ಮುಂಚೂಣಿ ನಾಯಕರು ಹಾಗೂ ಉಸ್ತುವಾರಿಗಳು ಪಕ್ಷದ ಆಂತರಿಕ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಎಡವಿದ್ದಾರೆ. ನಮ್ಮ ಸರ್ಕಾರವಿದ್ದೂ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಉತ್ಸಾಹ ಕಳೆದುಕೊಂಡಿದ್ದರು. ಇದಕ್ಕೆ ಪ್ರಮುಖ ಸ್ಥಾನದಲ್ಲಿರುವ ಕೆಲವು ಕಾಂಗ್ರೆಸ್ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಯಾವುದೇ ಉತ್ತಮ ಭಾಂಧವ್ಯ, ಸಂವಹನ ಇಲ್ಲದಿರುವುದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ನಿರ್ಲಕ್ಷ ಕಾರಣವಾಗಿದೆ.

ಈ ಕುರಿತು ಹಲವು ಕಾರ್ಯಕರ್ತರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಸವಾಲಿನ ದಿನಗಳನ್ನು ಎದುರಿಸಲು, ಪಕ್ಷ ಹಾಗೂ ಸರ್ಕಾರದಲ್ಲಿ ಹಿರಿಯರ ಕಡೆಗಣನೆ ಸರಿದೂಗಿಸಬೇಕಾಗಿದೆ. ಸರ್ಕಾರದಲ್ಲಿ ಹಿರಿಯರಿಗೆ ಪ್ರಾತಿನಿಧ್ಯ ನೀಡುವಂತಾಗಲು ಕಾಂಗ್ರೆಸ್ ಪಕ್ಷದ ಹಿರಿಯರೆಲ್ಲರೂ ಒಂದೆಡೆ ಸೇರಿ ಪಕ್ಷದ ಹಿತ ಸಮಾಲೋಚಿಸಬೇಕಾಗಿದೆ. ಜೊತೆಗೆ ಹಿರಿಯರು ಯಾರೂ ಪಕ್ಷ ಬಿಡದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಹಿರಿಯ ನಾಯಕರು ಪಕ್ಷದಲ್ಲಿ ಮುಂದುವರೆಯುವುದು ಕಷ್ಟ ಸಾಧ್ಯವಾದೀತು.

ಪಕ್ಷದ ಪರ ಚುನಾವಣಾ ಫಲಿತಾಂಶದಲ್ಲಿ ಎಡವಿದ ಸಚಿವರಿಗೆ ಪಕ್ಷ ಸಂಘಟನಾ ಜವಾಬ್ದಾರಿ ನೀಡುವುದರ ಜೊತೆಗೆ ಹಿರಿಯರಿಗೆ ಸರ್ಕಾರದಲ್ಲಿ ಸ್ಥಾನಮಾನ ನೀಡಿ ಪಕ್ಷದ ಆಂತರಿಕ ಅಸಮತೋಲನವನ್ನು ಸರಿಪಡಿಸುವ ಕಾರ್ಯವನ್ನು, ಜವಾಬ್ದಾರಿ ಹೊತ್ತಿರುವ ಕಾಂಗ್ರೆಸ್ ನಾಯಕರು ಗಮನ ಹರಿಸಬೇಕಾಗಿದೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top