fbpx
ಸಮಾಚಾರ

ಸಂಚಲನ ಸೃಷ್ಟಿಸಿದ ‘ಅವನೇ ಶ್ರೀಮನ್ನಾರಾಯಣ’ ಟೀಸರ್

ರಕ್ಷಿತ್ ಶೆಟ್ಟಿ ಅವರ ನಾಯಕತ್ವದಲ್ಲಿ ಮುಂಬರುವ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಮಾಸ್ ಪ್ರೇಕ್ಷಕರಿಗೆ ಬೇಕಾದ ‘ಆ್ಯಕ್ಷನ್’ ಇದೆ ಎನ್ನಬಹುದು. ಭಾರೀ ಬಜೆಟ್ ಹಾಗೂ ಅದ್ದೂರಿ ಮೇಕಿಂಗ್ ಮೂಲಕ ಚಿತ್ರವು ‘ರಿಚ್’ ಅಗಿ ಮೂಡಿ ಬಂದಿದೆ ಎನ್ನಬಹುದು.

 

 

ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​ಅನ್ನು ಮೀರಿಸುವಂತೆ ಎರಡನೇ ಟೀಸರ್ ರಿಲೀಸ್​ ಆಗಿದೆ. ಸಿನಿಮಾದಲ್ಲಿ ಕ್ಯಾಮೆರಾ ಕುಸುರಿ ಎಷ್ಟು ಅದ್ಭುತವಾಗಿರಲಿದೆ ಎಂಬುದಕ್ಕೆ ಟೀಸರ್​ ಸಾಕ್ಷಿಯಾಗಿದೆ. ಹಿನ್ನೆಲೆ ಸಂಗೀತ, ಸಂಭಾಷಣೆ ಎಲ್ಲವೂ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಅಲ್ಲದೆ, ಸಾಕಷ್ಟು ಪಾತ್ರ ಪರಿಚಯವನ್ನು ಇಲ್ಲಿ ಮಾಡಿಕೊಡಲಾಗಿದೆ.

1980ರ ದಶಕದ ಬ್ಯಾಕ್‍ಡ್ರಾಪ್‍ನಲ್ಲಿ ಸಾಗುವ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾಗೆ ಸಾವಿರಾರು ಜನ ಕಲಾವಿದರು ಸಾಥ್ ನೀಡಿದ್ದಾರೆ. ಬಿಡುಗಡೆಯಾದ ಒಂದೇ ದಿನದಲ್ಲಿ ಯೂಟ್ಯೂಬ್‍ನಲ್ಲಿ ನಂಬರ್ 1 ಟ್ರೆಂಡಿಂಗ್ ಆಗಿದೆ.

ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಹಿಂದಿ ಸೇರಿದಂತೆ ಪಂಚ ಭಾಷೆಯಲ್ಲಿ ಬೆಳ್ಳಿತೆರೆಗೆ ಬರಲಿದೆ. ಈ ಚಿತ್ರಕ್ಕೆ ಎಚ್.ಕೆ ಪ್ರಕಾಶ್ ಹಾಗೂ ಪುಷ್ಕರ್ ಮಲ್ಲಿಕಾರ್ಜುನಯ್ಯ ಕೋಟಿ ಕೋಟಿ ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಗೆ ನಟಿ ಶಾನ್ವಿ ಶ್ರೀವತ್ಸವ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿ ರಕ್ಷಿತ್ ಶೆಟ್ಟಿ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top