fbpx
ಸಮಾಚಾರ

ಸ್ವಾತಂತ್ರ್ಯ ಹೋರಾಟಗಾರ್ತಿಗೆ ಹಿಗ್ಗಾಮುಗ್ಗ ಥಳಿಸಿದ ಸೊಸೆ- ವಿಡಿಯೋ ವೈರಲ್.

ಮಹಿಳೆಯೊಬ್ಬಳು ತನ್ನ ವಯಸ್ಸಾದ ಅತ್ತೆಗೆ ಸ್ವಲ್ಪವೂ ಕರುಣೆ ಇಲ್ಲದೇ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಹರಿಯಾಣದ ಮಹೇಂದ್ರಗರ್ ಜಿಲ್ಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಹಲ್ಲೆಗೊಳಗಾದ ವೃದ್ಧೆ ಇಂಡಿಯನ್​ ನ್ಯಾಷನಲ್​ ಆರ್ಮಿಯ ಸಂಸ್ಥಾಪಕ ಸುಭಾಷ್​ ಚಂದ್ರ ಬೋಸ್​ ಅವರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿದ್ದರು ಎಂದು ತಿಳಿದುಬಂದಿದೆ. ಜೊತೆಗೆ ಸರ್ಕಾರದಿಂದ 30 ಸಾವಿರ ರೂ. ಪಿಂಚಣಿ ಪಡೆಯುತ್ತಿದ್ದರು ಎನ್ನಲಾಗಿದೆ.

ಮಹಿಳೆಯ ಈ ಕುಕೃತ್ಯವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಅಲ್ಲದೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೆ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖಟ್ಟರ್ ಅವರು ಇದು ನಿಜಕ್ಕೂ ಖಂಡನೀಯ ಎಂದು ಟೀಕಿಸಿದ್ದಾರೆ. ಅಲ್ಲದೆ ಸೂಕ್ತ ಕ್ರಮದ ಭರವಸೆ ಕೂಡ ನೀಡಿದ್ದಾರೆ.

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಮಹಿಳೆ ಕಾಂತಾದೇವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ತನಿಖೆ ನಡೆಸಿರುವ ಪೊಲೀಸರು ಇದೀಗ ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 323 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ., ವೃದ್ಧೆಯನ್ನು ತಮ್ಮ ಕುಟುಂಬಕ್ಕೆ ಭಾರ ಎಂದು ತಿಳಿದ ಆಕೆಯ ಸೊಸೆ ನಿತ್ಯ ಆಕೆಗೆ ಕಿರುಕುಳ ನೀಡುತ್ತಿದ್ದರು ಎಂದು ತಿಳಿದುಬಂದಿದೆ..

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top