fbpx
ಸಮಾಚಾರ

ಟೀಂ ಇಂಡಿಯಾಕ್ಕೆ ದೊಡ್ಡ ಆಘಾತ- ಗಾಯಕ್ಕೆ ತುತ್ತಾಗಿದ್ದ ಶಿಖರ್ ಧವನ್ ಟೂರ್ನಿಯಿಂದಲೇ ‘ಔಟ್’.

ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿರುವ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ಗಾಯದ ಸಮಸ್ಯೆಗೆ ತುತ್ತಾಗಿರುವ ತಂಡದ ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ ಟೂರ್ನಿಯಿಂದ ಹೊರಬಂದಿದ್ದಾರೆ.

ಕಳೆದ ಆಸ್ಟ್ರೇಲಿಯಾ ಪಂದ್ಯದ ವೇಳೆ ಎಡಗೈ ಹೆಬ್ಬರಳಿಗೆ ಧವನ್ ಗಾಯ ಮಾಡಿಕೊಂಡಿದ್ದರು. ಬಳಿಕ ವೈದ್ಯಾಧಿಕಾರಿಗಳು ಪರೀಕ್ಷೆ ನಡೆಸಿದ್ದು ಮೂರು ವಾರಗಳ ಕಾಲ ವಿಶ್ರಾಂತಿ ಅಗ್ಯವಿದೆ ಎಂದು ಹೇಳಿದ್ದಾರೆ. ಬೆರಳಿಗೆ ಆಗಿರುವ ಗಾಯದ ಪ್ರಮಾಣವನ್ನು ಪತ್ತೆ ಹಚ್ಚಲು ಸ್ಕಾನಿಂಗ್ ಮಾಡಲಾಗಿತ್ತು. ಇದಾದ ಬಳಿಕ ಬಂದ ವರದಿ ಪರಿಶೀಲಿಸಿದ ವೈದ್ಯರು, ಧವನ್​ಗೆ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಪಂದ್ಯದ ವೇಳೆ ಟೀಂ ಇಂಡಿಯಾ ಫಿಲ್ಡೀಂಗ್ ನಲ್ಲಿ ಧವನ್ ಬದಲಿಗೆ ರವೀಂದ್ರ ಜಡೇಜಾ ಮೈದಾನಕ್ಕಿಳಿದಿದ್ದರು. ಆ ಬಳಿಕ ವೈದ್ಯಕೀಯ ತಪಾಸಣೆಗೆ ಒಳಪಟ್ಟ ಧವನ್ ಅವರಿಗೆ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ. ಪಂದ್ಯದಲ್ಲಿ ಧವನ್ 117 ರನ್ ಸಿಡಿಸಿ ಭಾರತ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೇ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು.

ಧವನ್ ಗಾಯದ ಸಮಸ್ಯೆಯಿಂದಾಗಿ ತೆರವುಗೊಂಡಿರುವ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮನ್ ಸ್ಥಾನಕ್ಕೆ ರಿಷಬ್ ಪಂತ್ ಹಾಗೂ ರಾಯುಡು ಅವರು ರಿಸರ್ವ್ ಆಟಗಾರರಾಗಿರುವುದರಿಂದ ಆಯ್ಕೆ ಸಮಿತಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲವಿದೆ. ಇತ್ತ ಶ್ರೇಯಾಸ್ ಅಯ್ಯರ್ ಕೂಡ ಸ್ಥಾನ ಪಡೆಯುವ ರೇಸ್‍ನಲ್ಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top