fbpx
ಸಮಾಚಾರ

ಮಳೆಯಲ್ಲಿ ಕೊಚ್ಚಿಹೋದ ಭಾರತ ನ್ಯೂಜಿಲ್ಯಾಂಡ್ ಪಂದ್ಯ- ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕ ಹಂಚಿಕೆ.

ನಾಟಿಂಗ್​​ಹ್ಯಾಮ್​​ನ ಟ್ರೆಂಟ್​ ಬ್ರಿಡ್ಜ್​​ ಮೈದಾನದಲ್ಲಿ ಇಂದು ನಡೆಯಬೇಕಿದ್ದ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯ ಮಳೆಗೆ ಆಹುತಿಯಾಗಿದೆ. ಸದ್ಯ ಮೈದಾನ ಸಂಪೂರ್ಣ ಒದ್ದೆಯಾಗಿದೆ. ಹೀಗಾಗಿ ಪಂದ್ಯ ರದ್ದು ಮಾಡಲಾಗಿದೆ. ಇದು ಈ ಬಾರಿಯ ವಿಶ್ವಕಪ್​ನಲ್ಲಿ ಫಲಿತಾಂಶ ಇಲ್ಲದೆ ರದ್ದಾಗುತ್ತಿರುವ ನಾಲ್ಕನೇ ಪಂದ್ಯ.

 

 

 

ಟೀಂ ಇಂಡಿಯಾ ಸೌತ್ಆಫ್ರಿಕಾ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯ ಗೆದ್ದು ಇದೀಗ ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿತ್ತು. ಎಲ್ಲಾದರು ಸ್ವಲ್ವ ಹೊತ್ತಿನಲ್ಲಿ ಮಳೆ ನಿಂತರೆ 20 ಓವರ್​ಗಳ ಪಂದ್ಯ ಆಡಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ, ಮಳೆರಾಯ ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಈ ಮೂಲಕ ಉಭಯ ತಂಡಗಳು ತಲಾ ಒಂದೊಂದು ಅಂಕವನ್ನು ಹಂಚಿಕೊಂಡಿದ್ದಾರೆ. 3ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಈ ಮೂಲಕ ಭಾರತಕ್ಕೂ ವರುಣನ ಕಾಟ ತಪ್ಪಿಲ್ಲ. ಪಂದ್ಯ ರದ್ದಾದ ಕಾರಣ ಭಾರತ ಹಾಗೂ ನ್ಯೂಜಿಲೆಂಡ್ ಒಂದೊಂದು ಅಂಕ ಹಂಚಿಕೊಂಡಿದೆ.

ನ್ಯೂಜಿಲೆಂಡ್ ಒಟ್ಟು 7 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರಿದರೆ, ಭಾರತ 5 ಅಂಕಗಳೊಂದಿಗೆ ಇಂಗ್ಲೆಂಡ್ ಹಿಂದಿಕ್ಕಿ 3ನೇ ಸ್ಥಾನಕ್ಕೇರಿದೆ. ಜೂನ್ 16 ರಂದು ಮ್ಯಾಂಚೆಸ್ಟರ್‌ನಲ್ಲಿ ಭಾರತ, ಬದ್ಧವೈರಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ನಹಾಗೆ ಪಾಕಿಸ್ತಾನ ವಿರುದ್ದದ ಪಂದ್ಯಕ್ಕೂ ಮಳೆ ಭೀತಿ ಇದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top