fbpx
ಸಮಾಚಾರ

ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ರಘು ದೀಕ್ಷಿತ್ -ಮಯೂರಿ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ರಘು ದೀಕ್ಷಿತ್ ಮತ್ತು ಡ್ಯಾನ್ಸರ್ ಮಯೂರಿ ದಂಪತಿ ಸಾಂಸಾರಿಕ ಜೀವನದಲ್ಲಿ ಬಿರುಕು ಮೂಡಿದೆ. ಇಬ್ಬರೂ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಹಿಂದೂ ವಿವಾಹ ವಿಚ್ಛೇದನ ಕಾಯ್ದೆ 13B ಅನ್ವಯ ಅವರ ಮನವಿಯನ್ನು ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ ವಿಚ್ಛೇದನ ಬಯಸಿರುವ ದಂಪತಿಗಳಿಗೆ ಆರು ತಿಂಗಳ ಕಾಲಾವಕಾಶವನ್ನು ಕೋರ್ಟ್ ನೀಡಿದೆ. ರಘು ದೀಕ್ಷಿತ್ ಮತ್ತು ಮಯೂರಿ ದಂಪತಿಯ ವಿಚ್ಛೇದನಕ್ಕೆ ಸಂಬಂಧಿಸಿದ ಈ ಕೇಸಿನ ವಿಚಾರಣೆಯನ್ನು ಡಿಸೆಂಬರ್ ನಲ್ಲಿ ನಡೆಸಲಾಗುವುದು‌.

ಅಂದಹಾಗೆ ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಗಾಯಕ ರಘು ದೀಕ್ಷಿತ್ ವಿರುದ್ಧ ಚಿನ್ಮಯಿ ಶ್ರೀ ಪಾದ್ ಎಂಬ ಗಾಯಕಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ವೇಳೆ ಪ್ರತಿಕ್ರಿಯೆ ನೀಡಿದ್ದ ಮಯೂರಿ ತಮ್ಮ ಸಾಂಸಾರಿಕ ಜೀವನದಲ್ಲಿ ಯಾವುದೂ ಸರಿ ಇಲ್ಲ, ನಾವು ಒಂದು ವರ್ಷದಿಂದ ಬೇರೆ ಬೇರೆ ಇದ್ದೇವೆ ಎಂದು ಹೇಳಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top