fbpx
ಸಮಾಚಾರ

ಮಂಡ್ಯ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಕೇಂದ್ರದಿಂದ 2 ಲಕ್ಷ ರೂ. ಪರಿಹಾರ

ಮಂಡ್ಯ ಜಿಲ್ಲೆಯ ಪಾಂಡವಪುರ ಕನಗನಮರಡಿನಲ್ಲಿ ಸಂಭವಿಸಿದ್ದ ಭೀಕರ ಬಸ್ ದುರಂತದಲ್ಲಿ ಮೃತಪಟ್ಟಿದ್ದ 30 ಮಂದಿಯ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದೆ.

 

 

 

ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ಘೋಷಿಸಿರುವುದಕ್ಕೆ ರಾಜ್ಯದ ಮುಖ್ಯಮಂತ್ರಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮಾಡುವ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ನವೆಂಬರ್ 24ರಂದು ಮಂಡ್ಯದ ಪಾಂಡವಪುರ ಕನಗನಮರಡಿ ನಲ್ಲಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ 30 ಜನರು ಅಸುನೀಗಿದ್ದರು. ಕರ್ನಾಟಕ ರಾಜ್ಯ ಸರಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top