fbpx
ಸಮಾಚಾರ

ಪುಲ್ವಾಮಾ ಹುತಾತ್ಮ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರೂ. ನೆರವು ನೀಡಿದ ಅಮಿತಾಬ್ ಬಚ್ಚನ್.

ಬಾಲಿವುಡ್ ಬಿಗ್ ಬಿ ಅಮಿತಾಬ್‌ ಬಚ್ಚನ್ ಅವರು ಪುಲ್ವಾಮಾ ದಾಳಿಯಲ್ಲಿ ಅಗಲಿದ 40 ಹುತಾತ್ಮರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಗಳ ಪರಿಹಾರವನ್ನು ನೀಡಿದ್ದಾರೆ. ಅವರ ಮಕ್ಕಳಾದ ಅಭಿಷೇಕ್ ಬಚ್ಚನ್, ಶ್ವೇತಾ ನಂದನ್ ಮತ್ತು ಪುಲ್ವಾಮಾ ದಾಳಿಯ ಹುತಾತ್ಮ ಯೋಧರ ಕೆಲವು ಕುಟುಂಬ ಸದಸ್ಯರು ಹಾಜರಿದ್ದರು.

ನನ್ನ ಮತ್ತೊಂದು ಭರವಸೆ ಈಡೇರಿದೆ. ಹುತಾತ್ಮ ಯೋಧರ ಕುಟುಂಬ ಸದಸ್ಯರಿಗೆ ಸ್ವಲ್ಪ ಧನಸಹಾಯ ಮಾಡಬೇಕೆಂದು ಬಯಸಿದ್ದೆ. ಅದು ಈಡೇರಿದೆ, ಸಿಆರ್ ಪಿಎಫ್ ಹುತಾತ್ಮ ಯೋಧರ ಕುಟುಂಬಸ್ಥರ ಹೆಸರು, ವಿಳಾಸ ತಿಳಿದುಕೊಳ್ಳಲು ಸ್ವಲ್ಪ ಸಮಯ ಹಿಡಿಯಿತು, ಆದರೂ ನಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಭಾರತ ಸರ್ಕಾರದ ನೆರವಿನಿಂದ ಮತ್ತು ಸಿಆರ್ ಪಿಎಫ್ ಹಿರಿಯ ಅಧಿಕಾರಿಗಳು ಮತ್ತು ಸಂಸ್ಥೆಗಳು ನಮ್ಮ ನೆರವಿಗೆ ಬಂದವು ಎಂದು ಅಮಿತಾಬ್ ಬಚ್ಚನ್ ಅವರು ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಅಮಿತಾಬ್ ಬಚ್ಚನ್ ಅವರು ಬಿಹಾರದ ಎರಡು ಸಾವಿರಕ್ಕೂ ಹೆಚ್ಚು ರೈತರ ಸಾಲವನ್ನು ತೀರಿಸಿ ಹೃದಯ ವೈಶಾಲ್ಯತೆಯನ್ನು ಮೆರೆದಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top