fbpx
ಸಮಾಚಾರ

“ಕೊಡಗು ನೆರೆ ಸಂತ್ರಸ್ತರಿಗೆ ಕಟ್ಟಿಸುತ್ತಿರೋ ಮನೆಗಳು ಚೆನ್ನಾಗಿಲ್ಲ” ಹರ್ಷಿಕಾ ಪೂಣಚ್ಚ

ಕೆಳೆದ ವರ್ಷ ಕೊಡಗಿನಲ್ಲಿ ಆಗಿದ್ದ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿದ್ದ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ ನಟಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.

ನೆನ್ನೆ ಮೈಸೂರಿನಲ್ಲಿ ಮಾತನಾಡಿದ್ದ ಅವರು, “ನಾನು ಇತ್ತೀಚೆಗೆ ಕೊಡಗು ಪ್ರವಾಹ ಸಂತ್ರಸ್ತರಿಗೆ ಸರ್ಕಾರ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಸಂತ್ರಸ್ತರಿಗೆ ಉತ್ತಮ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಪ್ರವಾಹವನ್ನ ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ, ನೈಸರ್ಗಿಕವಾಗಿ ಸಂಭವಿಸಿದೆ. ಹೀಗಾಗಿ ಪ್ರವಾಹ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ ವಿತರಣೆ ಮಾಡುವುದಾಗಿ ಹೇಳಿತ್ತು. ಆದರೆ ಇದುವರೆಗೂ ಮನೆ ಹಂಚಿಕೆಯಾಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top