fbpx
ಸಮಾಚಾರ

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಡಿ.ವಿ ಸದಾನಂದ ಗೌಡ, ಪ್ರಹ್ಲಾದ್ ಜೋಷಿ.

17ನೇ ಲೋಕಸಭೆಯ ಮೊಟ್ಟ ಮೊದಲ ಅಧಿವೇಶನ ಆರಂಭವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಆಯ್ಕೆ ಆಗಿರುವ 542 ಮಂದಿ ಸದಸ್ಯರು ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಅವರು ನಾಲ್ಕನೆಯವರಾಗಿ ತಮ್ಮ ಸರದಿ ಬಂದಾಗ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಲೋಕಸಭೆಯಲ್ಲಿ ಕನ್ನಡ ಮೊಳಗಿಸಿದರು. ಬಳಿಕ 12ನೆಯವರಾಗಿ ಪ್ರಮಾಣವಚನ ಸ್ವೀಕರಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರೂ ಸಂಸತ್ತಿನಲ್ಲಿ ಕನ್ನಡದ ಧ್ವನಿ ಮೊಳಗಿಸಿದರು. ಈ ವೇಳೆ ಇತರೇ ಸಂಸದರು ಮೇಜು ಕುಟ್ಟಿ ಸ್ವಾಗತ ಮಾಡಿದರು.

ಇನ್ನು ಲೋಕಸಭೆಯಲ್ಲಿ ಆಡಳಿತ ಪಕ್ಷದ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಮೊದಲಿಗರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಮಧ್ಯಪ್ರದೇಶದ ಸಾಗರ್ ಕ್ಷೇತ್ರದ ಸಂಸದ ವೀರೇಂದ್ರ ಕುಮಾರ್ ಹಂಗಾಮಿ ಸ್ಪೀಕರ್ ಆಗಿದ್ದು ಹೊಸ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಪ್ರಧಾನಿ ಮೋದಿ ಬಳಿಕ ರಾಜ್‍ನಾಥ್ ಸಿಂಗ್, ನಿತಿನ್ ಗಡ್ಕರಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top