fbpx
ಸಮಾಚಾರ

ಅನಂತಕುಮಾರ್ ಹೆಗ್ಡೆ ಬಿಟ್ಟು ಮಿಕ್ಕೆಲ್ಲಾ ಸಂಸದರು ಕನ್ನಡದಲ್ಲೇ ಪ್ರಮಾಣವಚನ.

17ನೇ ಲೋಕಸಭೆಯ ಮೊಟ್ಟ ಮೊದಲ ಅಧಿವೇಶನ ಆರಂಭವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಆಯ್ಕೆ ಆಗಿರುವ 542 ಮಂದಿ ಸದಸ್ಯರು ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೆನ್ನೆ ಕರ್ನಾಟಕದಿಂದ ಆಯ್ಕೆಯಾಗಿರುವ ಸಂಸದರಲ್ಲಿ ಕೆಲವರು ಪ್ರಮಾಣವಚನ ಸ್ವೀಕರಿಸಿದರು.

ವಿಶೇಷವೆಂದರೆ ಎಲ್ಲರೂ ಕನ್ನಡ ಭಾಷೆಯಲ್ಲಿಯೇ ಪ್ರಮಾಣವಚನ ಸ್ವೀಕರಿಸಿದರು.. ಆದರೆ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರು ಮಾತ್ರ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದರು.. ಅನಂತ್ ಕುಮಾರ್ ಹೆಗಡೆ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸದರೆ ಸುರೇಶ ಅಂಗಡಿ ಇಂಗ್ಲಿಷ್ ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇನ್ನು ಪ್ರತಾಪ್ ಸಿಂಹ, ಪ್ರಹ್ಲಾದ್ ಜೋಶಿ, ಸದಾನಂದ ಗೌಡ, ಡಿಕೆ ಸುರೇಶ್, ತೇಜಸ್ವಿ ಸೂರ್ಯ, ಸುಮಲತಾ ಅಂಬರೀಷ್ ಸೇರಿ ಇತರರರು ಮಾತೃ ಭಾಷೆ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿ ಕನ್ನಡ ಪ್ರೇಮ ಮೆರೆದರು.

ಇನ್ನು ಲೋಕಸಭೆಯಲ್ಲಿ ಆಡಳಿತ ಪಕ್ಷದ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಮೊದಲಿಗರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಮಧ್ಯಪ್ರದೇಶದ ಸಾಗರ್ ಕ್ಷೇತ್ರದ ಸಂಸದ ವೀರೇಂದ್ರ ಕುಮಾರ್ ಹಂಗಾಮಿ ಸ್ಪೀಕರ್ ಆಗಿದ್ದು ಹೊಸ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಪ್ರಧಾನಿ ಮೋದಿ ಬಳಿಕ ರಾಜ್‍ನಾಥ್ ಸಿಂಗ್, ನಿತಿನ್ ಗಡ್ಕರಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

542 ಸಂಸದರಲ್ಲಿ 267 ಮಂದಿ ಲೋಕಸಭೆಗೆ ಹೊಸ ಸದಸ್ಯರಾಗಿದ್ದು, ಅತೀ ದೊಡ್ಡ ಪಕ್ಷವಾಗಿರುವ ಬಿಜೆಪಿ 303 ಸದಸ್ಯ ಬಲದ ಪ್ರಚಂಡ ಬಹುಮತ ಹೊಂದಿದೆ. ಆದರೆ ಕಳೆದ ಬಾರಿಯಂತೆ ಈ ಬಾರಿಯೂ ಲೋಕಸಭೆಯಲ್ಲಿ ಯಾವುದೇ ಅಧಿಕೃತ ವಿಪಕ್ಷವಿಲ್ಲ. ಕಾಂಗ್ರೆಸ್ 52 ಸಂಸದರನ್ನು ಹೊಂದಿದ್ದರೂ ಅಧಿಕೃತ ವಿಪಕ್ಷ ಸ್ಥಾನಕ್ಕೆ 55 ಸ್ಥಾನಗಳು ಅಗತ್ಯವಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top