fbpx
ಸಮಾಚಾರ

“ಸಿದ್ದರಾಮಯ್ಯ ಕಾಂಗ್ರೆಸ್ಸನ್ನು ಈ ದುರ್ಗತಿಗೆ ತಂದಿದ್ದಾರೆ” ಸಿದ್ದು ವಿರುದ್ಧ ಮತ್ತೆ ಸಿಡಿದ ರೋಷನ್ ಬೇಗ್.

‘ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಅಲ್ಲ’ ಎಂದು ಶಿವಾಜಿನಗರ ಶಾಸಕ, ಮಾಜಿ ಸಚಿವ ರೋಷನ್ ಬೇಗ್ ಕರ್ನಾಟಕದ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಕ್ಷದಿಂದ ಉಚ್ಛಾಟನೆಯಾದ ಬಳಿಕ ಇದೇ ಮೊದಲ ಬಾರಿಗೆ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೋಷನ್ ಬೇಗ್ ಅವರು, ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ನಾಯಕತ್ವವನ್ನು ಪ್ರಶ್ನಿಸುವ ಮತ್ತು ಟೀಕಿಸುವ ನಾಯಕರನ್ನು ಅಮಾನತು ಮಾಡಲಾಗುತ್ತಿದೆ ಎಂದು ಬೇಗ್ ಆರೋಪಿಸಿದರು.

ನಾನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ಸಿನ ಶಿಸ್ತಿನ ಸಿಪಾಯಿಯಾಗಿದ್ದೇನೆ. ಸಿದ್ದರಾಮಯ್ಯ ಕಾಂಗ್ರೆಸ್ಸಿನ ಶಿಸ್ತಿನ ಸಿಪಾಯಿ ಅಲ್ಲ. ಸಿದ್ದರಾಮಯ್ಯ ಒತ್ತಡವೂ ನನ್ನ ಅಮಾನತಿಗೆ ಕಾರಣವಿರಬಹುದು ಎಂದು ಶಿವಾಜಿನಗರ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಮಂಗಳವಾರ ರಾತ್ರಿ ನನ್ನನ್ನು ಪಕ್ಷದಿಂದ ಅಮಾನತು ಮಾಡಿರುವ ಸುದ್ದಿ ತಿಳಿಯಿತು. ಸಿದ್ದರಾಮಯ್ಯ ಒತ್ತಡವೂ ನನ್ನ ಅಮಾನತಿಗೆ ಕಾರಣವಿರಬಹುದು. ನಾನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ ಸಿಪಾಯಿ. ಸಿದ್ದರಾಮಯ್ಯ ಕಾಂಗ್ರೆಸ್ಸಿನ ಸಿಪಾಯಿ ಅಲ್ಲ. ಅವರೇ ಕಾಂಗ್ರೆಸ್ಸನ್ನು ಈ ದುರ್ಗತಿಗೆ ತಂದಿದ್ದಾರೆ. ನಾನು ಸತ್ಯ ಹೇಳಿದ್ದೀನಿ. ಸತ್ಯ ಹೇಳೋದು ಅಪರಾಧಾನಾ? ನಾನು ಸತ್ಯ ಹೇಳಿದರೆ ಅವರಿಗೆ ತಡ್ಕೊಳ್ಳೋಕಾಗಲ್ಲವಾ? ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top