fbpx
ಸಮಾಚಾರ

ಬರ್ತಡೇಗೆ ವಿಶ್ ಮಾಡಿದ್ದ ಪಿಎಂ ಮೋದಿಗೆ ರಾಹುಲ್ ಧನ್ಯವಾದ ಹೇಳಿದ್ದು ಹೀಗೆ.

49ನೇ ಜನ್ಮದಿನವನ್ನಾಚರಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಶುಭ ಹಾರೈಸಿರುವ ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜನ್ಮ ದಿನದ ಶುಭಾಶಯಗಳು. ರಾಹುಲ್ ಅವರಿಗೆ ದೀರ್ಘ ಹಾಗೂ ಆರೋಗ್ಯಮಯ ಬದುಕನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆಂದು ಟ್ವೀಟ್ ಮಾಡಿದ್ದಾರೆ.

 

 

 

ನರೇಂದ್ರ ಮೋದಿಯ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ‘ನಿಮ್ಮ ಶುಭಾಶಯಕ್ಕೆ ಧನ್ಯವಾದ ನರೇಂದ್ರ ಮೋದೀಜೀ, ನಾನಿದನ್ನು ಗೌರವಿಸುತ್ತೇನೆ’ ಎಂದಿದ್ದಾರೆ.

ಇನ್ನು ಬುಧವಾರ ಬೆಳಿಗ್ಗೆ ಕಾಂಗ್ರೆಸ್‌ ಪ್ರಧಾನ ಕಚೇರಿಗೆ ಆಗಮಿಸಿದ ರಾಹುಲ್ ಅವರಿಗೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಶುಭಾಶಯ ಕೋರಿದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಟ್ವಿಟರ್‌ನಲ್ಲಿ #IAmRahulGandhi,#HappyBirthdayRahulGandhi, #RahulJi #RahulGandhiJi ಹ್ಯಾಷ್‌ಟ್ಯಾಗ್‌ಗಳು ಟ್ರೆಂಡಿಂಗ್ ಆಗಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top