fbpx
ಸಮಾಚಾರ

ಅಡಿಕೆ ಮರ ಏರುವ ಯಂತ್ರ ಆವಿಷ್ಕರಿಸಿದ ಬಂಟ್ವಾಳ ರೈತನಿಗೆ ಮಹೀಂದ್ರಾ ಸಂಸ್ಥೆಯಿಂದ ಪ್ರಶಂಸೆ.

ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ.

 

 

 

ಮುಂಬೈ ಮೂಲದ ದೇಶದಾದ್ಯಂತ ಜನಪ್ರಿಯವಾಗಿರುವ ಮಹೀಂದ್ರಾ ಗ್ರೂಪ್‌ ಅಧ್ಯಕ್ಷ ಮಂಗಳವಾರ ಮಧ್ಯಾಹ್ನ ಟ್ವೀಟ್‌ ಮಾಡಿದ್ದು ಹೀಗೆ. ‘ಹೌ ಕೂಲ್‌ ಇಸ್‌ ದಿಸ್‌? ಈ ಯಂತ್ರ ಕೆಲಸ ಮಾಡುವುದರಲ್ಲಿ ಯಶಸ್ವಿಯಾಗುವುದು ಮಾತ್ರವಲ್ಲ, ಕಡಿಮೆ ತೂಕದಲ್ಲಿ ವಿನ್ಯಾಸಗೊಳಿಸಲಾಗಿದೆ’ ಎಂದಿದ್ದಾರೆ. ಅಷ್ಟೇ ಅಲ್ಲದೆ ತನ್ನ ಸಿಬ್ಬಂದಿಗೆ ಈ ಕುರಿತು ರೈತನನ್ನು ಸಂಪರ್ಕಿಸಲು ಸೂಚಿಸಿದ್ದು ಗಮನಾರ್ಹ.

ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಈಗ ಯಂತ್ರಕ್ಕೆ ದೇಶ ಹಾಗೂ ಹೊರದೇಶಗಳಿಂದಲೂ ಬೇಡಿಕೆ ಬರುತ್ತಿದೆ.

ಈಗ ಮರ ಹತ್ತಿ ಕೆಲಸ ಮಾಡಲು ನುರಿತ ಕಾರ್ಮಿಕರು ಸಿಗುತ್ತಿಲ್ಲ ಎಂಬುದು ಕರಾವಳಿಯ ಅಡಕೆ ಬೆಳೆಗಾರರ ಅಳಲು. ಮರ ಹತ್ತಲು ಹಲವು ಯಂತ್ರಗಳ ಆವಿಷ್ಕಾರಗಳು ಕಾಲಕಾಲಕ್ಕೆ ನಡೆಯುತ್ತಲೇ ಇವೆ. ಇದಕ್ಕೊಂದು ಸೇರ್ಪಡೆ ಮರ ಹತ್ತುವ ಬೈಕ್. ಇದರ ಮೂಲ ಉದ್ದೇಶವೇ ಯಾರ ಸಹಾಯವೂ ಇಲ್ಲದೆ ಮರ ಹತ್ತುವುದು. ಸದ್ಯಕ್ಕೆ ಅಡಕೆ ಮರ ಹತ್ತಲು ಉಪಯೋಗವಾಗುತ್ತಿರುವ ಈ ಯಂತ್ರವನ್ನು ಪರಿಷ್ಕರಿಸಿ, ತೆಂಗಿನ ಮರ ಹತ್ತುವಂತೆ ಮಾಡುವ ಯೋಜನೆಯನ್ನು ಗಣಪತಿ ಭಟ್ ಹಾಕಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top