fbpx
ಸಮಾಚಾರ

ಟ್ವಿಟ್ಟರ್ ನಲ್ಲಿ ಕೊಹ್ಲಿ ಮೈಲಿಗಲ್ಲು- ವಿರಾಟ್ ಪ್ರತಿಕ್ರಿಯೆ ಹೇಗಿದೆ ಗೊತ್ತೇ?

ಏಕದಿನ ಕ್ರಿಕೆಟಿನಲ್ಲಿ 11 ಸಾವಿರ ರನ್ ದಾಖಲೆ ಬರೆದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. ವಿರಾಟ್ ಕೊಹ್ಲಿ ಈಗ ಟ್ವಿಟ್ಟರ್ ನಲ್ಲಿ 30 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿರರುವ ದಾಖಲೆಯನ್ನು ಹೊಂದಿದ್ದಾರೆ. ಆ ಮೂಲಕ ಅತಿ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ಭಾರತೀಯ ವ್ಯಕ್ತಿಗಳಲ್ಲಿ ಈಗ ವಿರಾಟ್ ಕೊಹ್ಲಿ ಕೂಡ ಸ್ಥಾನವನ್ನು ಪಡೆದಿದ್ದಾರೆ.

 

 

30 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿರುವುದಕ್ಕೆ ಟ್ವಿಟ್ಟರ್ ನಲ್ಲಿ ಸಂತಸಹಂಚಿಕೊಂಡಿರುವ ವಿರಾಟ್ ಕೊಹ್ಲಿ ” ಟ್ವಿಟ್ಟರ್ ನಲ್ಲಿ 30 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಕ್ಕೆ ಇದು ನನ್ನ ಪ್ರತಿಕ್ರಿಯೆ ಕೂಡ,” ಎಂದು ಅಚ್ಚರಿ ವ್ಯಕ್ತಪಡಿಸುವ ವಿಡಿಯೋವೊಂದನ್ನು ಹಂಚಿಕೊಂಡು ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಕೊಹ್ಲಿ ಆಡಿರುವ ಮೂರು ಇನ್ನಿಂಗ್ಸ್ ಗಳಲ್ಲಿ 177 ರನ್ ಗಳಿಸಿದ್ದು, ಇದರಲ್ಲಿ 2 ಅರ್ಧ ಶತಕಗಳು ಸೇರಿದೆ. ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ಸದ್ಯ 4ನೇ ಸ್ಥಾನವನ್ನು ಹೊಂದಿದ್ದು, ಆಡಿರುವ 4 ಪಂದ್ಯಗಳಲ್ಲಿ ಒಂದು ಪಂದ್ಯ ಮಳೆಯಿಂದ ರದ್ದಾಗಿರುವ ಪರಿಣಾಮ 7 ಅಂಕಗಳನ್ನು ಗಳಿಸಿದೆ. ಜೂನ್ 22 ರಂದು ನಡೆಯುವ ಆಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾ ಸಿದ್ಧತೆ ನಡೆಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top