fbpx
ಸಮಾಚಾರ

“ಸರ್ಕಾರ ಎಷ್ಟ್ ದಿನ ಇರುತ್ತೋ ಗೊತ್ತಿಲ್ಲ, ಮಧ್ಯಂತರ ಚುನಾವಣೆ ಬಂದರೂ ಬರಬಹುದು” HD ದೇವೇಗೌಡ ಹೊಸ ಬಾಂಬ್​.

ರಾಜ್ಯದ ದೋಸ್ತಿ ಸರ್ಕಾರ ಹೆಚ್ಚು ದಿನ ಬಾಳಿಕೆ ಬರುವಂತೆ ತೋರುತ್ತಿಲ್ಲ. ದೋಸ್ತಿ ಸರ್ಕಾರದ ಭವಿಷ್ಯ ಕಾಂಗ್ರೆಸ್​ ಮುಖಂಡರ ಕೈಯಲ್ಲಿದೆ. ಹೀಗೆ ಮುಂದುವರಿದರೆ ಮಧ್ಯಂತರ ಚುನಾವಣೆ ನಡೆಯೋ ಬಗ್ಗೆ ಸಂಶಯವೇ ಇಲ್ಲ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ.

ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಬಾರದು ಎಂದು ಕಾಂಗ್ರೆಸ್​ನವರು ನಮ್ಮ ಬಳಿ ಓಡೋಡಿ ಬಂದರು. ಎಲ್ಲಾ ಚರ್ಚೆ ಮಾಡದೆ ಸರ್ಕಾರ ರಚನೆಗೆ ಮುಂದಾದರು. ಕುಮಾರಸ್ವಾಮಿಯವರನ್ನೇ ಸಿಎಂ ಮಾಡಿ ಅಂತ ಕೇಳಿಕೊಂಡರು. ಈಗ ಒನ್ ಥರ್ಡ್ ನಿಯಮವೂ ಇಲ್ಲ, ಏನೂ ಇಲ್ಲ ಎಂದು ಹೇಳುವ ಮೂಲಕ ಬಹಿರಂಗವಾಗಿ ದೇವೇಗೌಡರು ಕಾಂಗ್ರೆಸ್​ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

. ಮೈತ್ರಿ ಸರಕಾರ ಮಾಡಲೇ ಬೇಕು ಅಂತ ನಂಗೇನು ಇರ್ಲಿಲ್ಲ. ಆದರೆ ದೆಹಲಿ ನಾಯಕರು ಬಂದು ನಿಮ್ಮ ಮಗನನ್ನ ಮುಖ್ಯಮಂತ್ರಿ ಮಾಡ್ಬೇಕು ಅಂದ್ರು ಎಂದು ತಿಳಿಸಿದ್ದಾರೆ. ಸಾರ್ವತ್ರಿಕ ಚುನಾವಣೆ ನಂತರ ಹೈಕಮಾಂಡ್ ಸ್ವಲ್ಪ ಶಕ್ತಿ ಕಳೆದುಕೊಂಡಿದೆ, ಸರಕಾರ ಎಷ್ಟ್ ದಿನ ಇರುತ್ತೋ ಗೊತ್ತಿಲ್ಲ. ಕಾಂಗ್ರೆಸ್ ಮುಖಂಡರ ಕೈಯಲ್ಲಿ ಸರಕಾರ ಇದೆ. ಜೆಡಿಎಸ್ ಜೊತೆ ಹೊರಟ್ರೆ ಕಾಂಗ್ರೆಸ್ ಪಕ್ಷ ಹೋಗುತ್ತೆ ಅನ್ನೋ ಸಂಕಟ ಇದೆ. ಹೀಗಾಗಿ ನಮ್ಮ ಮಂತ್ರಿ ಸ್ಥಾನವನ್ನೂ ತೆಗೆದ್ಕೊಂಡಿದ್ದಾರೆ ಎಂದು ದೇವೇಗೌಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆ ಸೋಲಿಗೆ ನಾವು ಕಾರಣವೇ? ಹಾಗೇನಾದ್ರೂ ಇದ್ದರೆ ಬಹಿರಂಗವಾಗಿಯೇ ಹೇಳಬಹುದು. ನಾನು ಮಲ್ಲಿಕಾರ್ಜುನ ಖರ್ಗೆಯನ್ನು ಸಿಎಂ ಮಾಡಿ ಎಂದಿದ್ದೆ. ಕಾಂಗ್ರೆಸ್​ಗೆ ಸರ್ಕಾರ ನಡೆಸೋ ಮನಸ್ಸಿದೆಯಾ ಇಲ್ವಾ? ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ ಹೇಳಿದ್ದಾರೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top