fbpx
ಸಮಾಚಾರ

‘ಮಿಸ್ ಸೌತ್ ಇಂಡಿಯಾ’ ಕಿರೀಟವನ್ನು ಮುಡಿಗೇರಿಸಿಕೊಂಡ ಕುಲವಧು ಧನ್ಯಾ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕ ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019 ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

 

 

ಈ ಬಗ್ಗೆ ತಮ್ಮ ಇನ್‍ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿರುವ ದೀಪಿಕಾ, “ಮಿಸ್ ಸೌತ್ ಇಂಡಿಯಾ 2019ರ ಸ್ಪರ್ಧೆಯಲ್ಲಿ ತಾನು ಅಂತಿಮ ಸುತ್ತಿಗೆ ತಲುಪಿದ್ದು ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019ರ ಟೈಟಲ್ ಗೆದ್ದಿದ್ದೇನೆ. ನನ್ನಲ್ಲಿ ನಂಬಿಕೆ ಇಟ್ಟವರಿಗೆ ಹಾಗೂ ಆತ್ಮವಿಶ್ವಾಸದಿಂದ ರ‍್ಯಾಂಪ್ ಮೇಲೆ ಹೆಜ್ಜೆ ಹಾಕಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ‘ಮಿಸ್ ಬ್ಯುಟಿಫುಲ್ ಸ್ಮೈಲ್’ ಟೈಟಲ್ ಸಹ ಸಿಕ್ಕಿದೆ” ಎಂದು ತಮ್ಮ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top