fbpx
ಸಮಾಚಾರ

9 ತಿಂಗಳ ಹಸುಗೂಸಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ದುಷ್ಟ- ಕಂದಮ್ಮ ಸಾವು.

ಒಂಬತ್ತು ತಿಂಗಳ ಹೆಣ್ಣುಮಗುವಿನ ಮೇಲೆ ನೆರೆಮನೆಯ ಯುವಕ ಅತ್ಯಾಚಾರಕ್ಕೆ ಯತ್ನಿಸಿದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ ತೆಲಂಗಾಣದ ವಾರಂಗಲ್‌ನಲ್ಲಿ ಬುಧವಾರ ನಡೆದಿದೆ.

ಹೆಣ್ಣುಮಗುವನ್ನು ಹೊತ್ತುಕೊಂಡು ಹೋದ ವ್ಯಕ್ತಿ ಅದರ ಮೇಲೆ ಅತ್ಯಾಚಾರ ಮಾಡಲೂ ಪ್ರಯತ್ನಿಸಿದ್ದಾನೆ. ಲೈಂಗಿಕವಾಗಿ ಕಿರುಕುಳ ಕೊಟ್ಟಿದ್ದಾನೆ. ಆ ಮಗು ಅಳಲು ಪ್ರಾರಂಭಿಸಿದ ಕೂಡಲೇ ಅದರ ಬಾಯಿ ಕಟ್ಟಿದ್ದಾನೆ. ಈ ಕಾರಣಕ್ಕೆ ಉಸಿರುಗಟ್ಟಿ ಮಗು ಮೃತಪಟ್ಟಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಗು ಕಳೆದು ಹೋಗಿದೆ ಎಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಮಗುವಿನ ಜೊತೆಗೆ ಆರೋಪಿಯನ್ನೂ ಪತ್ತೆ ಹಚ್ಚಿದ್ದಾರೆ. ಪ್ರಜ್ಞಾಹೀನವಾಗಿದ್ದ ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿದರೂ ಅಷ್ಟೂತಿಗಾಗಲೇ ಆಗುವಿನ ಪ್ರಾಣಪಕ್ಷಿ ಹಾರಿ ಹೋಗಿತ್ತು, ವೈದ್ಯರೂ ಕಂದಮ್ಮ ಈಗಾಗಲೇ ಸಾವನ್ನಪ್ಪಿದೆ ಎಂಬುದನ್ನು ದೃಢಪಡಿಸಿದ್ದಾರೆ.

ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ. ಮಗುವಿನ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದ್ದು, ಲೈಂಗಿಕ ದೌರ್ಜನ್ಯ ಆಗಿದೆಯೇ ಇಲ್ಲವೇ ಎಂಬುದು ಇನ್ನಷ್ಟೇ ತನಿಖೆಯಿಂದ ತಿಳಿದುಬರಬೇಕಿದೆ.

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top