fbpx
ಸಮಾಚಾರ

ಬೆಳ್ಳಿತೆರೆಗೆ ರಾಧಿಕಾ ಪಂಡಿತ್ ರೀ ಎಂಟ್ರಿಗೆ ಮುಹೂರ್ತ ಫಿಕ್ಸ್

ರಾಕಿಂಗ್ ಸ್ಟಾರ್ ಯಶ್ ಅವರನ್ನು ಮದುವೆಯಾದ ನಂತರ ತೆರೆಮರೆಗೆ ಸರಿದಿದ್ದ ಸ್ಯಾಂಡಲ್ ವುಡ್ ಕ್ಯೂಟ್ ನಟಿ ರಾಧಿಕಾ ಪಂಡಿತ್ ಮತ್ತೆ ಬೆಳ್ಳಿ ತೆರೆ ಮೇಲೆ ಮಿಂಚಲು ತಯಾರಾಗುತ್ತಿದ್ದಾರೆ. ರಾಧಿಕಾ ಮತ್ತು ನಿರೂಪ್ ಬಂಡಾರಿ ಅಭಿನಯದ “ಆದಿಲಕ್ಷ್ಮಿ ಪುರಾಣ” ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ.

ಈ ಚಿತ್ರ ಜುಲೈ 19 ರಂದು ತೆರೆ ಕಾಣಲಿದೆ.ಚಿತ್ರಕ್ಕೆ ಸೆನ್ಸಾರ್ ಮಂಡಳಿ ಇದಾಗಲೇ ಯು/ಎ ಪ್ರಮಾಣಪತ್ರ ನೀಡಿದೆ. ಆದರೆ ಇದೀಗ ವಿಶ್ವಕಪ್ ಕ್ರಿಕೆಟ್ ನಡೆಯುತ್ತಿರುವ ಕಾರಣ ಪ್ರೇಕ್ಷಕರು ಚಿತ್ರ ವೀಕ್ಷಣೆಗೆ ಆಗಮಿಸುವುದು ಅನುಮಾನವಿದ್ದ ಕಾರಣ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಚಿತ್ರ ಬಿಡುಗಡೆಯನ್ನು ಮುಂದೂಡಿದ್ದಾರೆ.

ರಾಕ್’ಲೈನ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ತಮಿಳಿನ ಪ್ರಸಿದ್ಧ ನಿರ್ದೇಶಕರಾದ ಮಣಿರತ್ನಂ ಅವರ ಜೊತೆ ಕೆಲಸ ಮಾಡಿದ ಅನುಭವವಿರುವ ನಿರ್ದೇಶಕಿ ‘ಪ್ರಿಯಾ’ ಅವ್ರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಕನ್ನಡಿಗ ರಾಕ್ ಲೈನ್ ವೆಂಕಟೇಶ್ ಈ ಚಿತ್ರಕ್ಕೆ ಬಂಡವಾಳವನ್ನು ಹೂಡಿದ್ದಾರೆ. ಸೌಮ್ಯ ಜಗನ್ ಮೂರ್ತಿ, ಜೋ ಸೈಮನ್, ಯಶವಂತ್ ಶೆಟ್ಟಿ, ಭರತ್ ಕಲ್ಯಾಣ್ ಸೇರಿದಂತೆ ಅನೇಕರು ಚಿತ್ರದಲ್ಲಿ ನಟಿಸಿದ್ದಾರೆ.

ತಿಂಗಳುಗಳ ಹಿಂದೆ ಈ ಚಿತ್ರದ ಟೀಸರ್ ಒಂದು ಬಿಡುಗಡೆಯಾಗಿದ್ದು ಸಿನಿರಸಿಕರ ಮೆಚ್ಚುಗೆಗೆ ಕಾರಣವಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top