fbpx
ಸಮಾಚಾರ

ಕೆಎಸ್ಆರ್‌ಟಿಸಿ ನೇಮಕಾತಿ: 1500 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಶೀಘ್ರದಲ್ಲಿಯೇ 1500 ಹುದ್ದೆಗಳನ್ನು ಭರ್ತಿ ಮಾಡಲಿದೆ. 2019ರ ನೇಮಕಾತಿ ಆದೇಶ ಶೀಘ್ರವೇ ಪ್ರಕಟವಾಗಲಿದ್ದು ಚಾಲಕ, ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕೆಎಸ್ಆರ್‌ಟಿಸಿ ವೆಬ್‌ಸೈಟ್ ಮೂಲಕ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕೆಎಸ್ಆರ್‌ಟಿಸಿ ವೆಬ್‌ಸೈಟ್ ಮೂಲಕ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆರ್ಥಿಕ ಇಲಾಖೆ ಒಪ್ಪಿಗೆ ಸಿಕ್ಕ ತಕ್ಷಣ ನೇಮಕಾತಿ ಆದೇಶವನ್ನು ಹೊರಡಿಸಲಾಗುತ್ತದೆ. ಜತೆಗೆ ಕೆಎಸ್‌ಆರ್‌ಟಿ ಜೂನ್‌ 2019 (ತಾತ್ಕಾಲಿಕ) ಹುದ್ದೆಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬುಹುದಾಗಿದೆ.

10ನೇ ತರಗತಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಬೃಹತ್ ವಾಹನ (Heavy License)ಚಲಾಯಿಸುವ ಪರವಾನಗಿ ಕಡ್ಡಾಯವಾಗಿರುತ್ತದೆ. ಮಾಸಿಕ ವೇತನ ಸುಮಾರು 11,640 ರೂ. ನಿಂದ 15,700 ರೂ. ಇರುವ ಈ ಹುದ್ದೆ ಅರ್ಜಿ ಸಲ್ಲಿಸುವ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೆಎಸ್‌ಆರ್‌ಟಿಸಿಯ ಅಧಿಕೃತ ವೆಬ್‌ಸೈಟ್‌ನ ಪ್ರಕಟಣೆಗಾಗಿ ನಿರೀಕ್ಷಿಸಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top