fbpx
ಸಮಾಚಾರ

ಟೀಂ ಇಂಡಿಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್.

ಪ್ರಸ್ತುತ ವಿಶ್ವಕಪ್‌ನಲ್ಲಿ ಸೋಲಿಲ್ಲದ ಸರದಾರನಾಗಿ ಮುನ್ನುಗ್ಗುತ್ತಿರುವ ಭಾರತ ತಂಡಕ್ಕೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಗುರುವಾರ ವೆಸ್ಟ್‌ಇಂಡೀಸ್ ವಿರುದ್ಧ ನಡೆಯಲಿರುವ ಮಹತ್ವದ ಕದನಕ್ಕೂ ಮುನ್ನ ಬಲಗೈ ವೇಗಿ ಭುವನೇಶ್ವರ್ ಕುಮಾರ್ ನೆಟ್ಸ್‌ಗೆ ಮರಳಿದ್ದು, ಅಭ್ಯಾಸವನ್ನು ಆರಂಭಿಸಿದ್ದಾರೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ತಂಡದಿಂದ ಹೊರಬಿದ್ದ ವೇಗಿ ಭುವನೇಶ್ವರ್ ಕುಮಾರ್ ಇದೀಗ ಅಭ್ಯಾಸಕ್ಕೆ ಇಳಿದಿದ್ದಾರೆ.

 

ಮ್ಯಾಂಚೆಸ್ಟರ್‌ನಲ್ಲಿ ನೆಟ್ ಪ್ರಾಕ್ಟೀಸ್ ಮಾಡುತ್ತಿರುವ ಟೀಂ ಇಂಡಿಯಾ ಬಳಗದಲ್ಲಿ ಭುವನೇಶ್ವರ್ ಕುಮಾರ್ ಕೂಡ ಕಾಣಸಿಕೊಂಡಿದ್ದಾರೆ. ಭುವಿ ಗಾಯದಿಂದ ಚೇತರಿಸಿಕೊಂಡಿರುವುದು ಟೀಂ ಇಂಡಿಯಾ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಇದರಿಂದಾಗಿ ವಿಂಡೀಸ್ ವಿರುದ್ಧ ಪಂದ್ಯದ ವೇಳೆಗೆ ಫಿಟ್ ಆಗುವರೇ ಎಂಬುದು ಕುತೂಹಲಕ್ಕೆಡೆ ಮಾಡಿದೆ.

ಅಪಘಾನಿಸ್ತಾನದ ಎದುರಿನ ಪಂದ್ಯದಲ್ಲಿ ಭುವನೇಶ್ವರ್ ಬದಲು ತಂಡ ಸೇರಿಕೊಂಡಿದ್ದ ಮೊಹಮ್ಮದ್ ಶಮಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಟೀಂ ಇಂಡಿಯಾಗೆ ರೋಚಕ ಗೆಲುವು ತಂದುಕೊಟ್ಟಿದ್ದರು. ಇದೀಗ ಭುವನೇಶ್ವರ್ ಕುಮಾರ್ ಕೂಡ ಫಿಟ್ ಆಗಿರೋದು ಟೀಂ ಇಂಡಿಯಾ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಪಡಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top